Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ ಸೀಸನ್ 11 ಗೆ ಹೋಗ್ತೀರಾ ಎಂದಿದ್ದಕ್ಕೆ ಹರಿಪ್ರಿಯಾ ಹೇಳಿದ್ದೇನು

Krishnaveni K
ಶುಕ್ರವಾರ, 27 ಸೆಪ್ಟಂಬರ್ 2024 (08:53 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಯಾವೆಲ್ಲಾ ಸ್ಪರ್ಧಿಗಳಿರಲಿದ್ದಾರೆ ಎಂಬ ಬಗ್ಗೆ ವಾಹಿನಿ ಈಗಾಗಲೇ ಸುಳಿವು ಕೊಟ್ಟಿದೆ. ಈ ಪೈಕಿ ನಟಿ ಹರಿಪ್ರಿಯಾ ಹೆಸರು ಕೇಳಿಬಂದಿತ್ತು.

ಇದಕ್ಕೆ ಕಾರಣವೂ ಇದೆ. ಮೊನ್ನೆಯಷ್ಟೇ ಕಲರ್ಸ್ ವಾಹಿನಿ ಈ ಬಾರಿ ಯಾರೆಲ್ಲಾ ಸ್ಪರ್ಧಿಗಳಿರಲಿದ್ದಾರೆ ಎಂದು ಕೆಲವು ಬ್ಲರ್ ಆಗಿರುವ ಫೋಟೋ ಪ್ರಕಟಿಸಿತ್ತು. ಈ ಫೋಟೋಗಳ ಪೈಕಿ ಒಂದು ಫೋಟೋದಲ್ಲಿರುವುದು ಹರಿಪ್ರಿಯಾರನ್ನೇ ಹೋಲುತ್ತಿತ್ತು. ಹೀಗಾಗಿ ಅವರು ಬಿಗ್ ಬಾಸ್ ಗೆ ಹೋಗುತ್ತಾರೆ ಎಂದು ಸುದ್ದಿಯಾಗಿತ್ತು.

ಇದರ ಬೆನ್ನಲ್ಲೇ ನಿನ್ನೆ ಪತಿ ವಸಿಷ್ಠ ಸಿಂಹ ಜೊತೆ ಕುಳಿತು ಹರಿಪ್ರಿಯಾ ಬಣ್ಣ ಹಚ್ಚುತ್ತಿರುವ ವಿಡಿಯೋವೊಂದನ್ನು ಪ್ರಕಟಿಸಿದ್ದರು. ಆ ಮೂಲಕ ಅವರು ಕಲರ್ಸ್ ವಾಹಿನಿಯ ಬಿಗ್ ಬಾಸ್ ಗೆ ಹೋಗುವ ಸುಳಿವು ನೀಡುತ್ತಿದ್ದಾರೇನೋ ಎಂದು ಎಲ್ಲರೂ ಅಂದುಕೊಂಡಿದ್ದರು.

ಆದರೆ ಎಲ್ಲರ ಅನುಮಾನಗಳಿಗೆ ಅವರೇ ಉತ್ತರ ನೀಡಿದ್ದಾರೆ. ಕೆಲವು ನೆಟ್ಟಿಗರು ನೀವು ಬಿಗ್ ಬಾಸ್ ಗೆ ಹೋಗ್ತೀರಾ ಎಂದು ಕಾಮೆಂಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಹರಿಪ್ರಿಯಾ ‘ನೋ ವೇ ಚಾನ್ಸೇ ಇಲ್ಲ’ ಎಂದಿದ್ದಾರೆ. ಬಿಗ್ ಬಾಸ್ ಗೆ ಹೋಗ್ಬೇಡಿ ಮೇಡಂ ಎಂದವರಿಗೆ ಥಮ್ಸ್ ಅಪ್ ಮಾಡಿ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments