Publish Date: Sun, 27 Nov 2022 (09:33 IST)
Updated Date: Sun, 27 Nov 2022 (09:35 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಸ್ಟಾರ್ ಜೋಡಿ ಹಸೆಮಣೆಯೇರಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಕನ್ನಡ ಚಿತ್ರರಂಗದಲ್ಲೇ ಸ್ವಂತ ಪ್ರತಿಭೆಯಿಂದ ಜನ ಮೆಚ್ಚುಗೆಗೆ ಪಾತ್ರರಾಗಿರುವ ಪ್ರತಿಭಾವಂತ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಇತ್ತೀಚೆಗೆ ನಟಿ ಹರಿಪ್ರಿಯಾ ಮೂಗು ಚುಚ್ಚಿಸಿಕೊಂಡಿದ್ದರು. ಈ ವೇಳೆ ಅವರ ಜೊತೆ ಮತ್ತೊಬ್ಬರಿದ್ದರು. ಅವರು ವಸಿಷ್ಠ ಸಿಂಹ ಎನ್ನಲಾಗಿದೆ. ಮದುವೆಗೆ ಮುನ್ನ ಹರಿಪ್ರಿಯಾ ಮೂಗು ಚುಚ್ಚಿಸಿಕೊಂಡಿದ್ದಾರೆ. ಸದ್ಯದಲ್ಲೇ ಇಬ್ಬರೂ ಸಿಹಿ ಸುದ್ದಿ ಕೊಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.