Select Your Language

Notifications

webdunia
webdunia
webdunia
webdunia

ಚೊಚ್ಚಲ ಮಗುವಿಗೆ ಜನ್ಮನೀಡಿದ ಹರ್ಷಿಕಾ ಪೂಣಚ್ಚ, ಏನು ಮಗು ಇಲ್ಲಿದೆ ಡೀಟೈಲ್ಸ್

Harshika Poonaccha

Krishnaveni K

ಬೆಂಗಳೂರು , ಶುಕ್ರವಾರ, 4 ಅಕ್ಟೋಬರ್ 2024 (11:38 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ-ಭುವನ್ ಪೊನ್ನಣ್ಣ ದಂಪತಿ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ನಿನ್ನೆ ಹರ್ಷಿಕಾಗೆ ಡೆಲಿವರಿಯಾಗಿದ್ದು, ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ.

ಹರ್ಷಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಡೆಲಿವರಿಯಾಗಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿರುವುದಾಗಿ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ನವರಾತ್ರಿಯ ಮೊದಲ ದಿನವೇ ಹೆಣ್ಣು ಮಗು ಜನಿಸಿರುವುದು ನಿಜಕ್ಕೂ ವಿಶೇಷವಾಗಿದೆ.

ನಟಿ ಮಿಲನಾ ನಾಗರಾಜ್, ಕವಿತಾ ಗೌಡ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದ ಮತ್ತೊಬ್ಬ ದಂಪತಿ ಹರ್ಷಿಕಾ-ಭುವನ್ ಆಗಿದ್ದರು. ಹರ್ಷಿಕಾ ಮತ್ತು ಭುವನ್ ಬಹಳ ವರ್ಷಗಳ ಕಾಲ ಪ್ರೀತಿಸಿ ಕಳೆದ ವರ್ಷ ಆಗಸ್ಟ್ ನಲ್ಲಿ ಹಿರಿಯರ ಸಮ್ಮುಖದಲ್ಲಿ ಕೊಡವ ಶೈಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಕೆಲವು ಸಮಯದ ಹಿಂದೆ ಬೇಬಿ ಬಂಪ್ ಫೋಟೋ ಶೂಟ್ ಮೂಲಕ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸಿಹಿ ಸುದ್ದಿ ನೀಡಿದ್ದರು. ಇದೀಗ ದೇವಿಯನ್ನು ಆರಾಧಿಸುವ ನವರಾತ್ರಿ ಸಂದರ್ಭದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ವಿಶೇಷವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಗೆ ಈಗ ಅನಾರೋಗ್ಯವೇ ವರವಾಗುವ ಲಕ್ಷಣವಿದೆ