Select Your Language

Notifications

webdunia
webdunia
webdunia
webdunia

ನಾನ್‌ ವೈಲೆನ್ಸ್‌ ಚಿತ್ರಕ್ಕೆ ಹ್ಯಾಟ್ರಿಕ್‌ ಹೀರೊ ಸಾಥ್‌: ಫಸ್ಟ್‌ ಲುಕ್‌ ಬಿಡುಗಡೆ ಮಾಡಿದ ಶಿವಣ್ಣ

Nov Violence

sampriya

ಬೆಂಗಳೂರು , ಗುರುವಾರ, 30 ಮೇ 2024 (16:36 IST)
Non Violence, Shivrajkumar, Metro Shirish,‌
ಬೆಂಗಳೂರು: ಪಂಚಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ʻನಾನ್ ವೈಲೆನ್ಸ್ʼ ಸಿನಿಮಾಕ್ಕೆ ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್‌ ಹೀರೊ ಶಿವರಾಜ್ ಕುಮಾರ್  ಸಾಥ್ ನೀಡಿದ್ದಾರೆ. ಚಿತ್ರದ ಫಸ್ಟ್ ಲುಕ್ ಅನ್ನು ಶಿವಣ್ಣ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ʻಮೆಟ್ರೋʼ ಖ್ಯಾತಿಯ ನಿರ್ದೇಶಕ ಆನಂದ್ ಕೃಷ್ಣನ್ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರದಲ್ಲಿ ಮೆಟ್ರೋ ಶಿರೀಶ್, ಬಾಬಿ ಸಿಂಹ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸುತಿದ್ದಾರೆ. ದಿತಿ ಬಾಲನ್, ಗರುಡ ರಾಮ್, ಆದಿತ್ಯ ಕಥಿರ್ ತಾರಾಬಳಗದಲ್ಲಿದ್ದಾರೆ.

ʻನಾನ್ ವೈಲೆನ್ಸ್ʼ ಚಿತ್ರೀಕರಣ ಮುಕ್ತಾಯ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಚಿತ್ರದ ಟೀಸರ್ ಮತ್ತು ಟ್ರೈಲರ್‌ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

90ರ ದಶಕದಲ್ಲಿ ಮಧುರೈ ಜೈಲಿನೊಳಗೆ ಸಂಭವಿಸುವ ಘಟನೆಗಳ ಸುತ್ತ ಸುತ್ತುವ ಒಂದು ಆಕರ್ಷಕ ಚಿತ್ರಕಥೆಯನ್ನು ಆನಂದ್ ರಚಿಸಿದ್ದಾರೆ. ಮೆಟ್ರೋ ಮತ್ತು ಕೊಡಿಯಲ್ಲಿ ಒರುವನ್ ಚಿತ್ರಗಳ ಸತತ ಗೆಲುವಿನ ನಂತರ ನಿರ್ದೇಶಕ ಆನಂದ ಕೃಷ್ಣನ್ ಈ ಚಿತ್ರದ ಮೂಲಕ ಹ್ಯಾಟ್ರಿಕ್ ಯಶಸ್ಸನ್ನು ತಮ್ಮದಾಗಿಸಿಕೊಳ್ಳವ ನಿರೀಕ್ಷೆಯಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂದು ವದಂತಿ