Publish Date: Tue, 08 Dec 2020 (18:09 IST)
Updated Date: Tue, 08 Dec 2020 (18:12 IST)
ಸ್ಯಾಂಡಲ್ ವುಡ್ ನ ಹಿರಿಯ ನಾಯಕ ಶಿವರಾಜ್ ಕುಮಾರ್ ಅವರು ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಭಾರತ ಬಂದ್ ಗೆ ಹಲವೆಡೆ ಧರಣಿ, ಪ್ರತಿಭಟನೆಗಳು ನಡೆಯುತ್ತಿದ್ದು, ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಈ ನಡುವೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರೈತರ ಬೆಂಬಲಕ್ಕೆ ನಿಂತಿದ್ದಾರೆ.
ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ ಎಂದು ನಟ ಶಿವರಾಜ್ ಕುಮಾರ್ ಟ್ವಿಟ್ ಮಾಡಿದ್ದಾರೆ.