Webdunia - Bharat's app for daily news and videos

Install App

ಹಾವೇರಿ ಅಪಘಾತ: ನುಡಿದಂತೆ ನಡೆದ ಶಿವರಾಜ್ ಕುಮಾರ್ ದಂಪತಿ

Krishnaveni K
ಸೋಮವಾರ, 8 ಜುಲೈ 2024 (14:37 IST)
ಹಾವೇರಿ: ಇತ್ತೀಚೆಗೆ ಹಾವೇರಿಯಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬದವರಿಗೆ ಧನ ಸಹಾಯ ಮಾಡುವ ಮೂಲಕ ಶಿವರಾಜ್ ಕುಮಾರ್ ದಂಪತಿ ನುಡಿದಂತೆ ನಡೆದುಕೊಂಡಿದ್ದಾರೆ.

ಹಾವೇರಿಯಲ್ಲಿ ಇತ್ತೀಚೆಗೆ ಟಿಟಿ ವಾಹನ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ವಾಹನ ಪೂಜೆಗಾಗಿ ದೇವಸ್ಥಾನಕ್ಕೆ ತೆರಳಿದ್ದ ಕುಟುಂಬ ವಾಪಸಾಗುವಾಗ ಅಪಾಘಾತ ಸಂಭವಿಸಿತ್ತು. ಮೃತರೆಲ್ಲರೂ ಬಡ ಕುಟುಂಬಕ್ಕೆ ಸೇರಿದವರಾಗಿದ್ದರು.

ಹೀಗಾಗಿ ಈ ಕುಟುಂಬಗಳಿಗೆ ಪರಿಹಾರ ಹಣ ಘೋಷಿಸುವವರೆಗೂ ಅಂತ್ಯ ಸಂಸ್ಕಾರ ನಡೆಸಲ್ಲ ಎಂದು ಬಂಧು ವರ್ಗದವರು ಪಟ್ಟು ಹಿಡಿದಿದ್ದರು. ಅದರಂತೆ ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದರು. ಇದರ ನಡುವೆ ಶಿವರಾಜ್ ಕುಮಾರ್ ದಂಪತಿ ಕೂಡಾ ವೈಯಕ್ತಿಕವಾಗಿ ತಲಾ 1 ಲಕ್ಷ ರೂ. ಹಣ ಸಹಾಯ ಮಾಡುವುದಾಗಿ ಘೋಷಿಸಿದ್ದರು.

ಅದರಂತೆ ಈಗ ಎಮ್ಮೆಹಟ್ಟಿಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಲ್ಲದೆ 1 ಲಕ್ಷ ರೂ. ಹಣ ಪರಿಹಾರ ನೀಡಿದ್ದಾರೆ. ಈ ಮೂಲಕ ಶಿವಣ್ಣ ದಂಪತಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments