ಆತ ಹೀರೋ ಅಲ್ಲ, ಖಳನಾಯಕ: ದರ್ಶನ್ ವಿರುದ್ಧ ರೇಣುಕಾಸ್ವಾಮಿ ತಂದೆ ಆಕ್ರೋಶ

Sampriya
ಬುಧವಾರ, 12 ಜೂನ್ 2024 (15:46 IST)
ಚಿತ್ರದುರ್ಗ: ನಟ ದರ್ಶನ್‌ಗೆ ಶಿಕ್ಷೆ ಆಗಲೇಬೇಕು, ಅವನು ಹೀರೋ ಅಲ್ಲ ಖಳನಾಯಕ. ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನುಷ್ಯತ್ವವೂ ಇಲ್ಲ ಎಂದು ಕೊಲೆಯಾದ ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಕಿಡಿಕಾರಿದ್ದಾರೆ.

ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ, ಅವನಿಗೆ ಇಂತಹ ಶಿಕ್ಷೆಯಾ? ಏನು ಮಾಡದ ತಪ್ಪಿಗೆ ನನ್ನ ಮಗ ಬಲಿ ಆದ. ಅವನ ಪಾಡಿಗೆ ಅವನು ಇದ್ದ, ಏನೂ ಮಾಡಿಲ್ಲ. ಯಾವುದೇ ಗಲಾಟೆ ಗೋಜಿಗೆ ಹೋಗಿರಲಿಲ್ಲ ಎಂದು ಅವರು ಹೇಳಿದ್ದಾರೆ.

ನನ್ನ ಮಗ ಹಾಗೂ ಪವಿತ್ರಾ ಗೌಡ ನಡುವೆ ಚಾಟಿಂಗ್ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ನಿರಂತರ ಚಾಟಿಂಗ್ ಮಾಡುತ್ತಿದ್ದರು ಎಂದು ಮಾಹಿತಿ ಕೊಟ್ಟಿದ್ದಾರೆ ಎಂದು ರೇಣುಕಾ ಸ್ವಾಮಿ ತಾಯಿ ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ
Show comments