ಲೈಂಗಿಕ ಕಿರುಕುಳದ ಆರೋಪ ಹೊತ್ತ ಗಾಯಕ ರಘು ದೀಕ್ಷಿತ್ ವಿರುದ್ಧವೇ ಮಾತನಾಡಿದ ಪತ್ನಿ ಮಯೂರಿ

Webdunia
ಶುಕ್ರವಾರ, 12 ಅಕ್ಟೋಬರ್ 2018 (09:28 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಅವರ ಮೇಲೆ ತಮಿಳು ಗಾಯಕಿ ಚಿನ್ಮಯಿ ಶ್ರೀಪಾದ್ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಈ ಬಗ್ಗೆ ಇದೀಗ ರಘು ದೀಕ್ಷಿತ್ ಪತ್ನಿ ಮಯೂರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿರುವ ಮಯೂರಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರು ಧೈರ್ಯದಿಂದ ಮುಂದೆ ಬಂದು ಮುಕ್ತವಾಗಿ ಅನ್ಯಾಯದ ವಿರುದ್ಧ ಹೋರಾಡಬೇಕು. ಅಸಭ್ಯವಾಗಿ, ನಡೆದುಕೊಂಡವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.


ಲೈಂಗಿಕ ಕಿರುಕುಳಕ್ಕೊಳಗಾಗಿರುವ ಮಹಿಳೆಯರಿಗೆ ತಾನು  ಬೆಂಬಲ ನೀಡುವುದಾಗಿಯೂ ಹಾಗೂ ಲೈಂಗಿಕ ದೌರ್ಜನ್ಯವೆಸಗಿದವರಿಗೆ ಸರಿಯಾದ ಶಿಕ್ಷೆ ನೀಡಿ ಆ ಮೂಲಕ ಬೇರೆ ಪುರುಷರು ಪಾಠ ಕಲಿಯುವಂತಾಗಬೇಕು ಎಂದು ತಿಳಿಸಿದ್ದಾರೆ.


ಈಗಾಗಲೇ ರಘು ದೀಕ್ಷಿತ್ ಹಾಗೂ ಮಯೂರಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯುವ ನಿರ್ಧಾರ ಮಾಡಿದ್ದಾರೆ. ಈಗಾಗಲೇ ಅವರಬ್ಬರ ವಿಚ್ಛೇದನ ಪ್ರಕ್ರಿಯೆ ಜಾರಿಯಲ್ಲಿದ್ದು, ಆದಷ್ಟು ಬೇಗ ಅವರು ವಿಚ್ಛೇದನ ಪಡೆಯತ್ತಿರುವ ವಿಚಾರವನ್ನು ಸ್ವತಃ ರಘು ದೀಕ್ಷಿತ್ ಅವರೇ ತಮ್ಮ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ