Select Your Language

Notifications

webdunia
webdunia
webdunia
webdunia

ಕನ್ನಡಕ್ಕೆ ಸೂಪರ್ ಹಿಟ್ ಹಾಡು ನೀಡಿದ ಗುರುಕಿರಣ್‌ಗೆ ಗೌರವ ಡಾಕ್ಟರೇಟ್

Gurukiran

Sampriya

ಬೆಂಗಳೂರು , ಸೋಮವಾರ, 9 ಸೆಪ್ಟಂಬರ್ 2024 (15:55 IST)
Photo Courtesy X
ಬೆಂಗಳೂರು: ಕನ್ನಡಕ್ಕೆ ಸೂಪರ್ ಹಿಟ್ ಹಾಡುಗಳನ್ನು ನೀಡಿದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

ನಾಳೆ ನಡೆಯಲಿರೋ ಬೆಂಗಳೂರು ವಿವಿಯ 59ನೇ ಘಟಿಕೋತ್ಸವದಲ್ಲಿ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತದೆ ಅಂತ ಬೆಂಗಳೂರು ವಿವಿ ಕುಲಪತಿ ಡಾ.ಜಯಕರ್ ಅವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲೆ, ಸಂಗೀತ ಕ್ಷೇತ್ರದ ಸಾಧನೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಕ್ರೀಡೆ, ಸಮಾಜ ಸೇವೆ ಕ್ಷೇತ್ರದಲ್ಲಿನ ಸಾಧನೆಗೆ ಕೆ.ಎಸ್.ರಾಜಣ್ಣ ರಾಜ್ಯ ಮಾಜಿ ಆಯುಕ್ತರು,ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ, ಕರ್ನಾಟಕ ಸರ್ಕಾರ ಇವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಘೋಷಿಸಲಾಗಿದೆ ಎಂದು ಹೇಳಿದರು.

ಈ ಬಾರಿಯ ಘಟಿಕೋತ್ಸವದಲ್ಲಿ 31382 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ  ಮಾಡಲಾಗುತ್ತಿದೆ. ಹಾಗೇ 140 ಜನರಿಗೆ ಪಿಹೆಚ್‌ಡಿ ಪ್ರದಾನ ಮಾಡಲಾಗುತ್ತದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಲಿವುಡ್​ಗೆ ಶಾಕ್​: ಸೂಪರ್‌ ಹಿಟ್‌ ಸಿನಿಮಾಗಳ ನಿರ್ಮಾಪಕ ದಿಲ್ಲಿಬಾಬು ಮೃತ್ಯು