Webdunia - Bharat's app for daily news and videos

Install App

ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಶೂಟಿಂಗ್: ನಟ ಫಹದ್ ಫಾಜಿಲ್ ವಿರುದ್ಧ ದೂರು

Sampriya
ಶನಿವಾರ, 29 ಜೂನ್ 2024 (14:22 IST)
Photo Courtesy X
ಕೇರಳ: ಮಲಯಾಳಂ ಖ್ಯಾತ ನಟ ಫಹದ್ ಫಾಜಿಲ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಪೇಯ್ನ್‌ಕಿಲಿ ಚಿತ್ರೀಕರಣ ಕೇರಳದ ಆಸ್ಪತ್ರೆಯಲ್ಲಿ ನಡೆದಿತ್ತು.

ಎರ್ನಾಕುಲಂನ ಅಂಗಮಾಲಿ ತಾಲೂಕು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಮಲಯಾಳಂ ಸಿನಿಮಾವೊಂದರ ಚಿತ್ರೀಕರಣ ನಡೆಯುತ್ತಿದ್ದು, ರೋಗಿಗಳಿಗೆ ತೊಂದರೆಯಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಶುಕ್ರವಾರ ನಟ ಫಹದ್ ಫಾಜಿಲ್ ವಿರುದ್ಧ ದೂರು ದಾಖಲಿಸಿಕೊಂಡಿದೆ.

ಮಾಧ್ಯಮ ವರದಿಗಳ ಆಧಾರದ ಮೇಲೆ ಸ್ವಯಂ ಪ್ರಕರಣವನ್ನು ದಾಖಲಿಸಿಕೊಂಡ ಆಯೋಗದ ಸದಸ್ಯೆ ವಿ ಕೆ ಬೀನಾಕುಮಾರಿ, ಏಳು ದಿನಗಳಲ್ಲಿ ವಿವರಣೆ ವರದಿಯನ್ನು ಸಲ್ಲಿಸುವಂತೆ ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಮತ್ತು ಅಂಗಮಾಲಿ ತಾಲೂಕು ಆಸ್ಪತ್ರೆ ಅಧೀಕ್ಷಕರಿಗೆ ಸೂಚಿಸಿದರು.

ಚಿತ್ರೀಕರಣದ ವೇಳೆ ನಟರು ಸೇರಿದಂತೆ ಸುಮಾರು 50 ಮಂದಿ ಹಾಜರಿದ್ದು, ತುರ್ತು ಕೋಣೆಯಲ್ಲಿ ಚಿತ್ರತಂಡ ದೀಪಗಳನ್ನು ಮಂದಗೊಳಿಸಿದೆ ಮತ್ತು ನಿರ್ಬಂಧಗಳನ್ನು ವಿಧಿಸಿದೆ ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ವೈದ್ಯರು ಚಿಕಿತ್ಸೆ ಮುಂದುವರೆಸಿರುವಾಗಲೇ ಚಿತ್ರದ ಶೂಟಿಂಗ್ ನಡೆದಿದೆ ಎಂದು ತಿಳಿದುಬಂದಿದೆ. ಪೇಯ್ನ್‌ಕಿಲಿ ಎಂಬ ಶೀರ್ಷಿಕೆಯ ಈ ಚಿತ್ರವನ್ನು ಮಲಯಾಳಂನ ಖ್ಯಾತ ನಟ ಫಹಾದ್ ಫಾಸಿಲ್ ನಿರ್ಮಿಸಿದ್ದಾರೆ.

ಸಿನಿಮಾದಲ್ಲಿ ಆಸ್ಪತ್ರೆಯನ್ನು ಖಾಸಗಿ ಸಂಸ್ಥೆ ಎಂದು ಬಿಂಬಿಸಲಾಗಿದೆ. ಇದೇ ವೇಳೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಅಂಗಮಾಲಿ ತಾಲೂಕು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಲನಚಿತ್ರವನ್ನು ಏಕೆ ಚಿತ್ರೀಕರಿಸಲಾಗಿದೆ ಎಂಬುದನ್ನು ವಿವರಿಸುವಂತೆ ಆರೋಗ್ಯ ಇಲಾಖೆ ನಿರ್ದೇಶಕರನ್ನು ಕೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments