Select Your Language

Notifications

webdunia
webdunia
webdunia
webdunia

ಆಸ್ಪತ್ರೆಗೆ ದಾಖಲಾದ ನಟಿ, ರಾಜಕಾರಣಿ ರೋಜಾ

ಆಸ್ಪತ್ರೆಗೆ ದಾಖಲಾದ ನಟಿ, ರಾಜಕಾರಣಿ ರೋಜಾ
ಚೆನ್ನೈ , ಬುಧವಾರ, 31 ಮಾರ್ಚ್ 2021 (09:46 IST)
ಚೆನ್ನೈ : ನಟಿ, ರಾಜಕಾರಣಿ ರೋಜಾ ಅವರು ಚೆನ್ನೈನ ಅಡಾಯಾರ್ನ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ  ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ರೋಜಾ ಅವರ ಪತಿ ರೋಜಾ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಆಡಿಯೋ ಹೇಳಿಕೆ ರಿಲೀಸ್ ಮಾಡಿದ್ದಾರೆ. ರೋಜಾ ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ ರೋಜಾ ಅವರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದು, ವಾರಾಂತ್ಯದಲ್ಲಿ 2 ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಜಾ ಅವರನ್ನು ಈಗ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಅವರಿಗೆ 2 ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದುನಿಯಾ ವಿಜಿ ‘ಸಲಗ’ ಪ್ರಮೋಷನಲ್ ಸಾಂಗ್ ರಿಲೀಸ್ ಏಪ್ರಿಲ್ 6 ಕ್ಕೆ