Publish Date: Fri, 01 Oct 2021 (10:00 IST)
Updated Date: Fri, 01 Oct 2021 (10:10 IST)
ಬೆಂಗಳೂರು: ಇಂದಿನಿಂದ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕಿದ್ದು, ಸ್ಯಾಂಡಲ್ ವುಡ್ ನಲ್ಲಿ ಸಂಭ್ರಮ ಮನೆ ಮಾಡಿದೆ.
ಮೊನ್ನೆಯಷ್ಟೇ ರಾಜ್ಯ ಸರ್ಕಾರ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಿತ್ತು. ಇಂದಿನಿಂದ ಅದು ಅಧಿಕೃತವಾಗಿ ಜಾರಿಗೆ ಬರುತ್ತಿದೆ. ಇದಕ್ಕಾಗಿ ಚಿತ್ರಮಂದಿರಗಳು ಸಿಂಗಾರಗೊಂಡಿವೆ.
ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಚಿತ್ರರಂಗಕ್ಕೆ ಇದು ಬೂಸ್ಟ್ ನೀಡಲಿದೆ. ಇಂದು ನವರಸನಾಯಕ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ಕಾಗೆ ಮೊಟ್ಟೆ ಸಿನಿಮಾ ಬಿಡುಗಡೆಯಾಗುತ್ತಿದೆ. ನಾಳೆ ಮಹಾತ್ಮಾ ಗಾಂಧೀಜಿ ಕುರಿತಾದ ಮೋಹನ ದಾಸ ಎನ್ನುವ ಸಿನಿಮಾ ಬಿಡುಗಡೆಯಾಗುತ್ತಿದೆ. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ ಅವರ ನಿರ್ದೇಶನದ ಸಿನಿಮಾ ಇದಾಗಿದ್ದು, ಇದರಲ್ಲಿ ಗಾಂಧೀಜಿಯ ಬಾಲ್ಯದ ಜೀವನವನ್ನು ತೆರೆದಿಡಲಾಗಿದೆ.