ಬೆಂಗಳೂರು: ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಶೂಟಿಂಗ್ಗಾಗಿ ನೂರಾರು ಮರಕ್ಕೆ ಕೊಡಲಿ ಹಾಕಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕಾಗಿ ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ನೂರಾರು ಮರವನ್ನು ಕಡಿದಿರುವುದು ಬೆಳಕಿಗೆ ಬಂದಿದೆ.
ಇದೀಗ ಸ್ಥಳಕ್ಕೆ ಮಂಗಳವಾದ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರ ಕಡಿದಿರುವ ಬಗ್ಗೆ ಸಿನಿಮಾ ತಂಡದ ಬಳಿ ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲೂ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.
ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ 'ಟಾಕ್ಸಿಕ್' ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.
ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ.