ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಇನ್‌ಸ್ಟಾದಲ್ಲಿ ಸ್ಟೇಟಸ್ ಹಾಕಿದ್ದು, ಚರ್ಚೆಗೆ ಕಾರಣವಾಗಿದೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾದಾಗಲೂ ನಟಿ ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪ್ರತಿಕ್ರಿಯಿಸಿದ್ದರು. ಇದೀಗ ಸುಪ್ರೀಂ ಮೆಟ್ಟಿಲೇರಿರುವ ಪ್ರಕರಣ ಸಂಬಂಧ ರಮ್ಯಾ, ಈ ಪ್ರಕರಣದಲ್ಲಿ ಸಾಮಾನ್ಯ ಪ್ರಜೆಗೂ ನ್ಯಾಯ ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರ ಸೇರಿ 17 ಆರೋಪಿಗಳು ಬಂಧನವಾಗಿದ್ದರು. ಜೈಲುವಾಸದ ನಂತರ ಎಲ್ಲಾ ಆರೋಪಿಗಳು ಜಾಮೀನು ಪಡೆದು ಆಚೆ ಬಂದಿದ್ದರು. ನಟ ದರ್ಶನ್ ಸೇರಿ ಏಳು ಜನರ ಜಾಮೀನು ಪ್ರಶ್ನಿಸಿ ಪೊಲೀಸ್ ಹಾಗೂ ಸರಕಾರ ಸುಪ್ರೀಂ ಕೋರ್ಟ್‌ಗೆ ಮನವಿಯನ್ನ ಸಲ್ಲಿಸಿತ್ತು.
ಇಂದಿನ ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರಾದ ಸಿದ್ಧಾರ್ಥ್ ಲೂತ್ರಾ ನ್ಯಾಯಮೂರ್ತಿ ಪರ್ದಿವಾಲಾ ಅವರ ಮುಂದೆ ಸ್ಪಷ್ಟವಾಗಿ ಜಾಮೀನು ವಜಾ ಮಾಡುವ ನಿಟ್ಟಿನಲ್ಲಿ ವಾದ ಮಂಡಿಸಿದ್ದಾರೆ.
ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ತರಾತುರಿಯ ನಿರ್ಧಾರವನ್ನು ಮಾಡಲು ನಾವು ಒಪ್ಪುವುದಿಲ್ಲ ಎಂದು ಅಭಿಪ್ರಾಯಪಟ್ಟು ಆದೇಶವನ್ನ ಕಾಯ್ದಿರಿಸಿದ್ದಾರೆ. ಈ ಎಲ್ಲ ಬೆಳವಣಿಗಳ ಬಗ್ಗೆ ನಟಿ ರಮ್ಯಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.