ಪುಪ್ಪಾ 2 ಸಿನಿಮಾದ ಸಕ್ಸಸ್‌ಗೆ ಬಯಸಿದ್ದೆ ಹೊರತು ಯಶ್‌ಗೆ ಅಪಮಾನ ಮಾಡಿಲ್ಲ: ಲಕ್ಷ್ಮೀಕಾಂತ ರೆಡ್ಡಿ

Sampriya
ಸೋಮವಾರ, 28 ಅಕ್ಟೋಬರ್ 2024 (15:54 IST)
Photo Courtesy X
ಬಳ್ಳಾರಿ: ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರ ನಟ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾದ ದಾಖಲೆಯನ್ನು ಮೀರಿ ಯಶಸ್ಸು ಗಳಿಸಲಿ ಹೇಳಿದ್ದ ಚಿತ್ರ ವಿತರಕ ಲಕ್ಷ್ಮೀಕಾಂತ ಅವರು ಸ್ಪಷ್ಟನೆ ನೀಡಿದ್ದಾರೆ.

ಇಂದು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರದ ವಿಚಾರವಾಗಿ ಕನ್ನಡ ಕೆಜಿಎಫ್ ಚಿತ್ರ ಅಥವಾ ನಟ ಯಶ್ ಗೆ ಅಪಮಾನವಾಗುವ ರೀತಿಯಲ್ಲಿ ತಾನು ಮಾತನಾಡಿಲ್ಲ ಎಂದು ಹೇಳಿದರು.

'ತೆಲುಗಿನ ಪುಷ್ಪ2' ಚಿತ್ರದ ವಿತರಕನಾಗಿ ಅದರ ಯಶಸ್ಸು ಬಯಸಿದ್ದೇನೆಯೇ ಹೊರತು, ನಟ ಯಶ್‌ ಅವರನ್ನಾಗಿಲಿ, ಅವರ ಕೆಜಿಎಫ್‌ ಸರಣಿಯ ಚಿತ್ರಗಳನ್ನಾಗಲಿ ಅಪಮಾನಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಟ ಅಲ್ಲು ಅರ್ಜುನ್‌ ನಟನೆಯ ಚಿತ್ರ ಪುಷ್ಪ 2 ಸಿನಿಮಾದ ಅಖಿಲ ಕರ್ನಾಟಕ ವಿತರಣೆಯನ್ನು ನಾನೇ ಪಡೆದುಕೊಂಡಿದ್ದೇನೆ. ಇತ್ತೀಚೆಗೆ ಚಿತ್ರತಂಡ ಹೈದರಾಬಾದ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಗೆ ನಾನೂ ಹೋಗಿದ್ದೆ. ಚಿತ್ರ ಕೆಜಿಎಫ್‌–2 ಸಿನಿಮಾದ ದಾಖಲೆಯನ್ನೂ ಮೀರಿ ಯಶಸ್ಸು ಗಳಿಸಲಿ ಎಂದು ಅಲ್ಲಿ ಆಶಿಸಿದ್ದೆ.

ಇದರಲ್ಲಿ ತಪ್ಪು ಹುಡುಕಿರುವ ಕೆಲ ಮಂದಿ ಸಾಮಾಜಿಕ ಮಾಧ್ಯಮದಲ್ಲಿ ವಿವಾದ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments