Publish Date: Sun, 30 Jun 2024 (17:50 IST)
Updated Date: Sun, 30 Jun 2024 (17:56 IST)
ಬೆಂಗಳೂರು: ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ ಕಟ್ಟಡ ಇರಲಿಲ್ಲ. ಸ್ವಂತ ಕಟ್ಟಡ ನಿರ್ಮಾಣವಾಗಿದ್ದು , ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರು.
1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.
ಆರ್ಥಿಕ ಸಹಾಯವನ್ನು ಸಂಘ ಕೇಳಿಯೇ ಇಲ್ಲ. ಸರ್ಕಾರದಿಂದ ಆರ್ಥಿಕ ಸಹಾಯ ಮಾಡಿಯೇ ಮಾಡುತ್ತದೆ ಎಂದರು.
ಡಾ: ರಾಜ್ ಕುಮಾರ್ ಅವರ ಕನಸಾಗಿಸಲಾಗುವುದು
ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೊಳ್ಳಲಿದ್ದು, ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಿದೆ . ಚಿತ್ರನಗರಿ ಡಾ: ರಾಜ್ ಕುಮಾರ್ ಅವರ ಕನಸಾಗಿತ್ತು ಅದನ್ನು ನನಸಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.