Webdunia - Bharat's app for daily news and videos

Install App

ದೀಪಿಕಾ ಪಡುಕೋಣೆ ಜತೆ ಹಳೆ ನೆನಪು ಹಂಚಿಕೊಂಡ ಇಂದ್ರಜಿತ್ ಲಂಕೇಶ್

Sampriya
ಶುಕ್ರವಾರ, 3 ಮೇ 2024 (17:19 IST)
Photo Courtesy X
ಫ್ಲ್ಯಾಶ್‌ಬ್ಯಾಕ್ ಶುಕ್ರವಾರದ ಉತ್ಸಾಹದಲ್ಲಿ ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಐಶ್ವರ್ಯ ಸಿನಿಮಾದ ಶೂಟಿಂಗ್ ದಿನದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಚಿತ್ರಗಳನ್ನು ಎಕ್ಸ್‌ನಲ್ಲಿ ನಟಿಗೆ ಮೀಸಲಾಗಿರುವ ಅಭಿಮಾನಿಗಳ ಕ್ಲಬ್‌ನಿಂದ ಪೋಸ್ಟ್ ಮಾಡಲಾಗಿದೆ.

ಐಶ್ವರ್ಯ ಸಿನಿಮಾದ ಶೂಟಿಂಗ್‌ ದಿನಗಳಲ್ಲಿ ನಟಿ ದೀಪಿಕಾ ಜತೆಗಿರುವ ಚಿತ್ರಗಳನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹಂಚಿಕೊಂಡಿದ್ದಾರೆ.


ಸದ್ಯ ಬಾಲಿವುಡ್‌ನ ಬಹುಬೇಡಿಕೆಯ ನಟಿ ದೀಪಿಕಾ ಪಡುಕೋಣೆ ಅವರು 2006ರಲ್ಲಿ ಕನ್ನಡದ 'ಐಶ್ವರ್ಯ' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಪಾದರ್ಪಣೆ ಮಾಡಿದರು. 2007ರಲ್ಲಿ ಫರಾಹ್ ಖಾನ್ ಅವರ ಶಾರುಖ್ ಖಾನ್ ನಟನೆಯ 'ಓಂ ಶಾಂತಿ ಓಂ' ಸಿನಿಮಾ ಮೂಲಕ ಬಾಕಿವುಡ್‌ಗೆ ಲಗ್ಗೆಯಿಟ್ಟ ಅವರು ತಮ್ಮ ನಟನೆ ಮೂಲಕ ಇಂದು ಭಾರತದ ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ.

ಫೋಟೋಗಳನ್ನು ಮೂಲತಃ ಚಿತ್ರ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಹಂಚಿಕೊಂಡಿದ್ದಾರೆ.

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸ್ಟಾರ್ ಜೋಡಿ ಈ ವರ್ಷದ ಫೆಬ್ರವರಿಯಲ್ಲಿ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ.

ಈಚೆಗೆ ಇವರ ನಟ ಹೃತಿಕ್ ರೋಷನ್ ಜತೆ ಫೈಟರ್ ಚಿತ್ರದಲ್ಲಿ ಅಭಿನಯಿಸಿದ್ದರು. ಸದ್ಯ ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿರುವ ದೀಪಿಕಾ ಅವರು ಕಲ್ಕಿ 2898 - AD ಯಲ್ಲಿ ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರೊಂದಿಗೆ ನಟಿಸಲಿದ್ದಾರೆ. ಕೆಲ ದಿನಗಳ ಹಿಂದೆ ಇವರು 'ಸಿಂಗಮ್ ಎಗೇನ್‌' ಸಿನಿಮಾದ ಶೂಟಿಂಗ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments