Select Your Language

Notifications

webdunia
webdunia
webdunia
Wednesday, 23 April 2025
webdunia

10ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಅತಿಥಿಯಾಗಿ ರಿಯಲ್ ಸ್ಟಾರ್ ಕುಟುಂಬಕ್ಕೆ ಆಹ್ವಾನ

ಅಮೇರಿಕಾ
ಬೆಂಗಳೂರು , ಶನಿವಾರ, 9 ಜೂನ್ 2018 (06:05 IST)
ಬೆಂಗಳೂರು : ಈ ಬಾರಿ ಅಮೇರಿಕಾದಲ್ಲಿ ನಡೆಯುತ್ತಿರುವ 10ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಅತಿಥಿಯಾಗಿ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಆಹ್ವಾನ ನೀಡಲಾಗಿದೆಯಂತೆ.


ಆಗಸ್ಟ್ 31ರಿಂದ ಸೆಪ್ಟಂಬರ್ 2 ರ ತನಕ ಅಮೇರಿಕಾದ ಡಲ್ಲಾಸ್ ನಗರದ ಶೆರಟನ್ ಕನ್ವೆನ್ಷನ್ ಸೆಂಟರ್‍ನಲ್ಲಿ ಮೂರು ದಿನಗಳ ಕಾಲ 10ನೇ ವಿಶ್ವ ಕನ್ನಡ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನಕ್ಕೆ ಅತಿಥಿಗಳಾಗಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಕುಟುಂಬ ಭಾಗಿಯಾಗಲಿದ್ದಾರಂತೆ. ಈ ವಿಷಯವನ್ನ ಸ್ವತಃ ಉಪೇಂದ್ರ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ‘ಈ ಸಮ್ಮೇಳನದಲ್ಲಿ ಭಾಗಿಯಾಗಲು ತುಂಬಾ ಸಂತೋಷವಾಗುತ್ತಿದೆ. ನನ್ನನ್ನು ಮತ್ತು ನನ್ನ ಕುಟುಂಬವನ್ನ ಆಹ್ವಾನ ಮಾಡಿದ್ದಕ್ಕೆ ಧನ್ಯವಾದಗಳು’ ಎಂದು ಸಂತೋಷದಿಂದ ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಲ್ಮಾನ್ ಖಾನ್ ಈ ಗುಣ ಜಾಕ್ವೆಲಿನ್ ಫೆರ್ನಾಂಡೀಸ್ ಗೆ ತುಂಬಾ ಇಷ್ಟವಂತೆ