ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

Sampriya
ಬುಧವಾರ, 19 ನವೆಂಬರ್ 2025 (12:44 IST)
Photo Credit X
ಬೆಂಗಳೂರು: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಚರ್ಚೆಗೆ ಗುರಿಯಾಗಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೋ.ಪುರುಷೋತ್ತಮ ಬಿಳಿಮಲೆ ಅವರು ಇದೀಗ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. 

ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ಮಂಗಳವಾರ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿ ಪುರುಷೋತ್ತಮ ಬಿಳಿಮಲೆ ಮಾತನಾಡಿದ್ದರು. ಈ ಸಂದರ್ಭದಲ್ಲಿ ಅವರು ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. 

ಇದರ ಬೆನ್ನಲ್ಲೇ ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾಧಿಸುತ್ತೇನೆ ಎಂದರು. 

ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು ಪ್ರಸ್ತುತ ಸಲಿಂಗಕಾಮವಿಲ್ಲ. ಆದರೆ ಇದೆಲ್ಲ 60, 70ರ ದಶಕದಲ್ಲಿತ್ತು. ನಾನು ವಿದ್ಯಾರ್ಥಿ ಬದುಕಿನಲ್ಲಿ ನೋಡಿದ್ದನ್ನು ಹೇಳಿದ್ದೇನೆ. ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ ಎಂದರು. 

ನಾನು ಕಳೆದ 30 ವರ್ಷಗಳಿಂದ ಯಕ್ಷಗಾನವನ್ನು ಮಾಡುತ್ತಿದ್ದು, ಈಗಾಲೂ ತಾಳಮದ್ದಲೆ ಅರ್ಥವನ್ನು ಹೇಳುತ್ತಿರುತ್ತೇನೆ. ನನಗೆ ಯಕ್ಷಗಾನದ ಬಗ್ಗೆ ಬಹಳಷ್ಟು ಗೌರವಿದೆ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments