ಬೆಂಗಳೂರು: ಕನ್ನಡ ಚಿತ್ರರಂಗದ ನಟ ದೊಡ್ಡಣ್ಣ ಅಳಿಯನ ಮನೆ ಮೇಲೆ ಐಟಿ ದಾಳಿ ನಡೆದಿರುವುದಾಗಿ ವರದಿಯಾಗಿದೆ. ನೋಟು ನಿಷೇಧವಾದ ಮೇಲೆ ಕಪ್ಪು ಹಣ ಬಿಳಿ ಮಾಡುವ ದಂಧೆ ಜೋರಾಗಿರುವ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ದೊಡ್ಡಣ್ಣಅಳಿಯ ವೀರೇಂದ್ರ ಮತ್ತು ಅವರ ಸಹೋದರರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಆದರೆ ದೇಶದಾದ್ಯಂತ ಈಗ ಅಕ್ರಮ ಹಣ ಪತ್ತೆಗಾಗಿ ಐಟಿ ಅಧಿಕಾರಿಗಳು ಶಂಕಿತರ ಮನೆ ಮೇಲೆ ದಾಳಿ ನಡೆಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ವೀರೇಂದ್ರ ಮತ್ತು ಅವರ ಸಂಬಂಧಿಕರ ಮನೆಯಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ