Publish Date: Thu, 03 Jan 2019 (15:53 IST)
Updated Date: Thu, 03 Jan 2019 (15:54 IST)
ಬೆಂಗಳೂರು: ಬೆಳಿಗ್ಗೆಯಿಂದಲೂ ಸ್ಯಾಂಡಲ್ ವುಡ್ ನ ಪ್ರಮುಖ ತಾರೆಯರ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿರುವ ಐಟಿ ಅಧಿಕಾರಿಗಳಿಗೆ ಏನೇನು ಸಿಕ್ಕಿವೆ ಗೊತ್ತಾ?
ರಾಕಿಂಗ್ ಸ್ಟಾರ್ ಯಶ್: ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಚಿನ್ನಾಭರಣಗಳು, ಹಣ, ಬ್ಯಾಂಕ್ ವ್ಯವಹಾರದ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಯಶ್ ಮನೆಯಲ್ಲಿ ಸಾಕಷ್ಟು ಚಿನ್ನಾಭರಣ ಸಿಕ್ಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಯಶ್ ಮನೆಯಲ್ಲಿಲ್ಲ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್: ಐಟಿ ಅಧಿಕಾರಿಗಳ ದಾಳಿ ವೇಳೆ ಪುನೀತ್ ರಾಜ್ ಕುಮಾರ್ ಸ್ವತಃ ಮನೆಯಲ್ಲಿದ್ದರು. ಹೀಗಾಗಿ ಅವರಿಂದಲೇ ಬ್ಯಾಂಕ್ ವ್ಯವಹಾರಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಇನ್ನು, ಐಟಿ ಅಧಿಕಾರಿಗಳ ದಾಳಿ ನಡುವೆಯೇ ಅಧಿಕಾರಿಗಳ ಅನುಮತಿ ಪಡೆದು ಪುನೀತ್ ಪತ್ನಿ ಶಾಲೆಗೆ ಹೋಗಿದ್ದ ಮಗಳನ್ನು ಕರೆದುಕೊಂಡು ಬಂದಿದ್ದಾರೆ. ಅದರ ಹೊರತಾಗಿ ಯಾರನ್ನೂ ಮನೆಯಿಂದ ಹೊರಗೆ ಹೋಗಲು ಬಿಟ್ಟಿಲ್ಲ.
ಕಿಚ್ಚ ಸುದೀಪ್: ದಾಳಿ ವೇಳೆ ಮೈಸೂರಿನಲ್ಲಿದ್ದ ಸುದೀಪ್ ಸುದ್ದಿ ತಿಳಿಯುತ್ತಿದ್ದಂತೇ ಸ್ಥಳಕ್ಕೆ ಆಗಮಿಸಿದ್ದಾರೆ. ಇದಕ್ಕೆ ಮೊದಲು ಮನೆಯಲ್ಲಿದ್ದ ತಾಯಿ ಬಳಿ ಬ್ಯಾಂಕ್ ವ್ಯವಹಾರಗಳ ಬಗ್ಗೆ ಮಾಹಿತಿ ಪಡೆಯಲಾಯಿತಾದರೂ ಅದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಮನೆಗೆ ಆಗಮಿಸಿರುವ ಸುದೀಪ್ ಬಳಿ ಅಧಿಕಾರಿಗಳು ಮನೆಯಲ್ಲಿ ಸಿಕ್ಕ ಬ್ಯಾಂಕ್ ವ್ಯವಹಾರದ ಪತ್ರಗಳು, ಆಸ್ತಿ ಪತ್ರ ದಾಖಲೆಗಳ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.
ರಾಕ್ ಲೈನ್ ವೆಂಕಟೇಶ್: ರಾಕ್ ಲೈನ್ ವೆಂಕಟೇಶ್ ಮನೆಯಲ್ಲಿ ಅಧಿಕಾರಿಗಳು ಪತ್ರ ವ್ಯವಹಾರಗಳ ಬಗ್ಗೆ ತನಿಖೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳ ಪ್ರಶ್ನೆಗಳಿಗೆ ಶಾಂತರಾಗಿಯೇ ಉತ್ತರಿಸಿರುವ ರಾಕ್ ಲೈನ್ ವೆಂಕಟೇಶ್ ತನಿಖೆಗೆ ಸಹಕಾರ ನೀಡುತ್ತಿದ್ದಾರೆ ಎನ್ನಲಾಗಿದೆ. ಇಲ್ಲಿಯೂ ಅಧಿಕಾರಿಗಳು ಮನೆಯವರನ್ನು ಹೊರಗಡೆ ಹೋಗಲು ಬಿಟ್ಟಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ