Publish Date: Thu, 16 Jan 2020 (10:35 IST)
Updated Date: Thu, 16 Jan 2020 (10:37 IST)
ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಶಾಕ್ ನೀಡಿದ್ದಾರೆ.
ಮೂಲತಃ ಕೊಡಗಿನವರಾದ ರಶ್ಮಿಕಾ ಕನ್ನಡ, ತೆಲುಗು, ತಮಿಳು ಸೇರಿದಂತೆ ಇತ್ತೀಚೆಗಿನ ದಿನಗಳಲ್ಲಿ ಭಾರೀ ಬೇಡಿಕೆಯಲ್ಲಿರುವ ನಟಿ. ಹೀಗಾಗಿ ಅವರ ಆದಾಯ ಲೆಕ್ಕ ಪತ್ರಗಳ ಬಗ್ಗೆ ಪರಿಶೀಲನೆ ನಡೆಸಲು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿರಾಜಪೇಟೆಯಲ್ಲಿರುವ ರಶ್ಮಿಕಾ ಮನೆಗೆ 3 ವಾಹನಗಳಲ್ಲಿ ಬಂದಿರುವ 10 ಐಟಿ ಅಧಿಕಾರಿಗಳ ತಂಡ ವಿವಿಧ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.