Select Your Language

Notifications

webdunia
webdunia
webdunia
webdunia

ಇದು ವ್ಯಕ್ತಿಗಳ ಮೇಲಿನ ದಾಳಿಯಲ್ಲ, ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಕಿಚ್ಚ ಸುದೀಪ್

ಕಿಚ್ಚ ಸುದೀಪ್

Sampriya

ಬೆಂಗಳೂರು , ಬುಧವಾರ, 23 ಏಪ್ರಿಲ್ 2025 (19:14 IST)
Photo Credit X
ಬೆಂಗಳೂರು: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕವಾಗಿದೆ. ಇದು ಕೇವಲ ವ್ಯಕ್ತಿಗಳ ಮೇಲಿನ ಆಕ್ರಮಣವಲ್ಲ, ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿ ಎಂದು  ನಟ ಕಿಚ್ಚ ಸುದೀಪ್‌ ಬರೆದುಕೊಂಡಿದ್ದಾರೆ.

ನಿನ್ನೆ ನಡೆದ ದಾಳಿ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡ ಅವರು, ಈ ದಾಳಿಗೆ ಕಾರಣಕರ್ತರ ವಿರುದ್ಧ ಶೀಘ್ರದಲ್ಲೇ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯಿಸಿದರು.

ಸುದೀಪ್ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ: ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ದಾಳಿ ನಡೆಸಿರುವುದನ್ನು ಕಂಡು ನೋವಾಗಿದೆ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮರಾಷ್ಟ್ರದ ಚೈತನ್ಯದ ಮೇಲಿನ ದಾಳಿ. ಇದು ಸಂಯಮದಿಂದ ಕೂರುವ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡುವ ಸಮಯ ಎಂದು ಬರೆದುಕೊಂಡಿದ್ದಾರೆ.

ಈ ಹೇಡಿತನದ ಹಿಂದಿರುವವರನ್ನು ಪತ್ತೆ ಹಚ್ಚಿ, ಬೇಗನೇ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video