ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
200 ಕೋಟಿ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆ ಶಾಮೀಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಗೆ ಮಧ್ಯಂತರ ಜಾಮೀನು ಸಿಕ್ಕಿದೆ.
ಈ ಪ್ರಕರಣದಲ್ಲಿ ಜಾಕ್ವೆಲಿನ್ ಕೂಡಾ ಆರೋಪಿ ಎಂದು ಇಡಿ ಅಧಿಕಾರಿಗಳು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಜಾಕ್ವೆಲಿನ್ ಬಂಧನ ಭೀತಿಯಲ್ಲಿದ್ದರು. ಇದೀಗ ದೆಹಲಿಯ ಪಟಿಯಾಲಾ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.