Publish Date: Mon, 28 Jun 2021 (12:57 IST)
Updated Date: Mon, 28 Jun 2021 (10:09 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ವಿಕ್ರಾಂತ್ ರೋಣ ಸಿನಿಮಾದಿಂದ ಭರ್ಜರಿಯೊಂದು ಸುದ್ದಿಯೊಂದು ಕೇಳಿಬರುತ್ತಿದೆ.
ಈ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಈ ವರ್ಷದ ಬಹುನಿರೀಕ್ಷೆಯ ಸಿನಿಮಾ ಇದಾಗಿದೆ.
ಈ ಸಿನಿಮಾದಲ್ಲಿ ಒಂದು ಹಾಡಿನ ಚಿತ್ರೀಕರಣ ಬಾಕಿಯಿದ್ದು, ಆ ಹಾಡಿಗೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸ್ಟೆಪ್ ಹಾಕಲಿದ್ದಾರಂತೆ. ಇದಕ್ಕಾಗಿ ಬೆಂಗಳೂರಿನಲ್ಲೇ ಅದ್ಧೂರಿ ಸೆಟ್ ಹಾಕಲಾಗುತ್ತಿದೆ. ಸದ್ಯಕ್ಕೆ ಇಂಡೋರ್ ಚಿತ್ರೀಕರಣಕ್ಕೆ ಸರ್ಕಾರ ಅವಕಾಶ ಕೊಟ್ಟಿಲ್ಲ. ಅನುಮತಿ ಸಿಕ್ಕ ಕೂಡಲೇ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ.