Webdunia - Bharat's app for daily news and videos

Install App

60 ನೇ ವರ್ಷಕ್ಕೆ ಕಾಲಿಟ್ಟ ನವರಸನಾಯಕ ಜಗ್ಗೇಶ್

Webdunia
ಶುಕ್ರವಾರ, 17 ಮಾರ್ಚ್ 2023 (10:26 IST)
Photo Courtesy: Twitter
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಗೆ ಇಂದು ಮತ್ತೊಬ್ಬ ಕನ್ನಡದ ಸ್ಟಾರ್ ನಟ ನವರಸನಾಯಕ ಜಗ್ಗೇಶ್ ಅವರೂ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ನವರಸನಾಯಕ ಜಗ್ಗೇಶ್ ಇಂದು 60 ನೇ  ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಇತ್ತೀಚೆಗೆ ತಮ್ಮ ನೆಚ್ಚಿನ ನಾಯಕ ಪ್ರಧಾನಿ ಮೋದಿಯವರನ್ನು ಕುಟುಂಬ ಸಮೇತ ಭೇಟಿಯಾಗಿ ಆಶೀರ್ವಾದ ಪಡೆದು ಬಂದಿದ್ದರು.

ಜಗ್ಗೇಶ್ ಪ್ರತೀ ಬಾರಿಯೂ ತಮ್ಮ ಹುಟ್ಟುಹಬ್ಬವನ್ನು ತಮ್ಮ ಆರಾಧ‍್ಯ ದೈವ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಕಳೆಯುತ್ತಾರೆ. 1983 ರಲ್ಲಿ ಚಿತ್ರರಂಗಕ್ಕೆ ಇಬ್ಬನಿ ಕರಗಿತು ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಜಗ್ಗೇಶ್ ಇಂದು ನವರಸನಾಯಕನಾಗಿ ಇದವರೆಗೆ ಸುಮಾರು 125 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇನ್ನೂ ಎರಡು ಸಿನಿಮಾಗಳು ಬಿಡುಗಡೆಗೆ ಬಾಕಿ ಇವೆ. ಇದರ ನಡುವೆ ಅವರು ಬಿಜೆಪಿ ಪಕ್ಷದಿಂದ ಸಂಸದರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ನಮ್ಮ ಕಡೆಯಿಂದ ಹ್ಯಾಪೀ ಬರ್ತ್ ಡೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments