Webdunia - Bharat's app for daily news and videos

Install App

ನನ್ನನ್ನು ಒಬ್ಬ ಥರ್ಡ್ ಕ್ಲಾಸ್ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ: ಸಿಟ್ಟಿಗೆದ್ದು ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಗ್ಗೇಶ್

Webdunia
ಶುಕ್ರವಾರ, 8 ಮಾರ್ಚ್ 2019 (09:01 IST)
ಬೆಂಗಳೂರು: ಇತ್ತೀಚೆಗೆ ಸೆಲೆಬ್ರಿಟಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಕೆಟ್ಟ ಮೆಸೇಜ್ ಗಳನ್ನು ಬರೆದುಕೊಳ್ಳುತ್ತಿರುವ ಪ್ರಕರಣಗಳು ಸಾಮಾನ್ಯವಾಗಿದೆ. ಆದರೆ ತಮ್ಮ ಹೆಸರಿನಲ್ಲಿ ಈ ರೀತಿ ನಕಲಿ ಖಾತೆ ಸೃಷ್ಟಿಸುತ್ತಿರುವವರ ವಿರುದ್ಧ ನಟ ಜಗ್ಗೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


ತಮ್ಮ ಖಾತೆಯನ್ನು ಫೋಟೋ ಶಾಪ್ ಮಾಡಿ ಅದೇ ರೀತಿಯ ಟ್ವಿಟರ್ ಖಾತೆ ತೆರೆದು ಕೆಟ್ಟ ಶಬ್ಧಗಳಲ್ಲಿ ಸಂದೇಶ ಬರೆಯುತ್ತಿರುವ ನಕಲಿ ಖಾತೆದಾರರ ವಿರುದ್ಧ ನಟ ಜಗ್ಗೇಶ್ ಸೈಬರ್ ಕ್ರೈಂ ವಿಭಾಗದ ಪೊಲೀಸರಿಗೆ ದೂರು ನೀಡಿದ್ದಾರೆ.

ಜತೆಗೆ ಟ್ವಿಟರ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ಜಗ್ಗೇಶ್ ‘ನನ್ನ ಹೆಸರಿನಲ್ಲಿ ಕೆಟ್ಟ ಕೆಟ್ಟ ಶಬ್ಧಗಳಲ್ಲಿ ಸಂದೇಶ ಬರೆದು, ನನ್ನನ್ನು ಒಬ್ಬ ಥರ್ಡ್ ಕ್ಲಾಸ್ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಸಾಕಷ್ಟು ನಕಲಿಗಳನ್ನು ನಾನು ಜೀವನದಲ್ಲಿ ನೋಡಿದ್ದೇನೆ. ನನ್ನ ಹೆಸರಿನಲ್ಲಿ ನಿಮಗೆ ಯಾವುದೇ ಕೆಟ್ಟ ಸಂದೇಶ ಬಂದರೂ ನನಗೆ ತಿಳಿಸಿ. ನಾನು ಯಾವತ್ತೂ ಇಂತಹ ಕೆಟ್ಟ ಮಾತುಗಳನ್ನು ಆಡಲ್ಲ. ಇಂತಹ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿರುವೆ’ ಎಂದು ಜಗ್ಗೇಶ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ದಿಡೀರ್ ಆಗಿ ಅಭಿಮಾನಿಗಳಿಗೆ ಒಂದು ಮೆಸೇಜ್ ಕೊಟ್ಟ ರಾಜ್ ಬಿ ಶೆಟ್ಟಿ

ವಿಷ್ಣುವರ್ಧನ್ ಇರುವ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ವಿವಾದಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments