Publish Date: Fri, 18 Mar 2022 (10:00 IST)
Updated Date: Fri, 18 Mar 2022 (10:06 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ನಿನ್ನೆ ಬಿಡುಗಡೆಯಾಗಿದ್ದು, ಈ ಸಿನಿಮಾ ಮೊದಲ ದಿನವೇ ಭರ್ಜರಿ ಗಳಿಕೆ ಮಾಡಿದೆ.
ಮೂಲಗಳ ಪ್ರಕಾರ ಮೊದಲ ದಿನವೇ ಜೇಮ್ಸ್ 25 ರಿಂದ 30 ಕೋಟಿ ರೂ. ಗಳಿಕೆ ಮಾಡಿದೆ. ಮೊದಲ ದಿನ ಸಾವಿರಾರು ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಿ ಹೌಸ್ ಫುಲ್ ಪ್ರದರ್ಶನಗೊಂಡಿತ್ತು.
ಹೀಗಾಗಿ ಚಿತ್ರದ ಮೊದಲ ದಿನದ ಕಲೆಕ್ಷನ್ 30 ಕೋಟಿವರೆಗೆ ತಲುಪಿದೆ ಎನ್ನಲಾಗಿದೆ. ಈ ಮೂಲಕ ಕೆಜಿಎಫ್ 1 ದಾಖಲೆಯನ್ನೂ ಮುರಿದಿದೆ. ವೀಕೆಂಡ್ ನಲ್ಲಿ ಚಿತ್ರ ವೀಕ್ಷಿಸುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.