Publish Date: Sun, 13 Mar 2022 (08:50 IST)
Updated Date: Sun, 13 Mar 2022 (09:13 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಪ್ರಿ ರಿಲೀಸ್ ಕಾರ್ಯಕ್ರಮ ಇಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಲಿದೆ.
ಸಿನಿಮಾ ಬಿಡುಗಡೆ ಪೂರ್ವ ಕಾರ್ಯಕ್ರಮಕ್ಕೆ ಶಿವರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಹಾಗೂ ಚಿತ್ರರಂಗದ ಗಣ್ಯರು ಆಗಮಿಸಲಿದ್ದಾರೆ. ಜೊತೆಗೆ ಅಭಿಮಾನಿಗಳಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಹೀಗಾಗಿ ಕಾರ್ಯಕ್ರಮಕ್ಕೆ ಭಾರೀ ಜನ ಸೇರುವ ನಿರೀಕ್ಷೆಯಿದೆ. ಇಂದು ಸಂಜೆ 7 ಗಂಟೆಗೆ ಚಾಮರ ವಜ್ರ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.