Webdunia - Bharat's app for daily news and videos

Install App

ಬಿಗ್ ಬಾಸ್ ಗೆ ಎಂಟ್ರಿ ಕೊಡುತ್ತಾರಾ ಈ ಸೆಲೆಬ್ರಿಟಿಗಳು?!

Webdunia
ಬುಧವಾರ, 18 ಸೆಪ್ಟಂಬರ್ 2019 (11:04 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಕಿಚ್ಚ ಸುದೀಪ್ ನಿರೂಪಿಸುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 7 ಗೆ ಇನ್ನು ಕೆಲವೇ ದಿನಗಳು ಬಾಕಿಯಿದೆ.


ಈಗಾಗಲೇ ಪ್ರೋಮೋಗಳು ಪ್ರಸಾರವಾಗುತ್ತಿದ್ದು, ಅಕ್ಟೋಬರ್ ನಲ್ಲಿ ಬಿಗ್ ಬಾಸ್ ಶುರುವಾಗುತ್ತಿರುವುದಾಗಿ ಸ್ವತಃ ಕಿಚ್ಚ ಸುದೀಪ್ ಸುಳಿವು ನೀಡಿದ್ದಾರೆ. ಈಗಾಗಲೇ ಬಿಗ್ ಬಾಸ್ ಗೆ ಸ್ಪರ್ಧಿಗಳ ಪಟ್ಟಿ ತಯಾರಿಸಲಾಗುತ್ತಿದೆಯಂತೆ.

ಹೀಗಾಗಿ ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಸೆಲೆಬ್ರಿಟಿಗಳು ಇರಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಮೂಲಗಳ ಪ್ರಕಾರ ಮನೆದೇವ್ರು ದಾರವಾಹಿ ಖ್ಯಾತಿಯ ಜಯ್ ಡಿಸೋಜಾ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಸದ್ಯಕ್ಕೆ ತೆಲುಗಿನ ಎರಡು ಧಾರವಾಹಿಗಳಲ್ಲಿ ಬ್ಯುಸಿಯಾಗಿರುವ ಜಯ್ ಆ ಧಾರವಾಹಿ ತಂಡ ಅನುಮತಿ ಕೊಟ್ಟರೆ ಬಿಗ್ ಬಾಸ್ ಗೆ ಎಂಟ್ರಿಯಾಗಲು ತಯಾರಾಗಿದ್ದಾರೆ. ಮತ್ತೊಂದೆಡೆ ಇದೀಗ ಮದುವೆಯಾಗಿ ಚಿತ್ರರಂಗದಿಂದ ದೂರವಿರುವ ನಟಿ ಅಮೂಲ್ಯ ಹೆಸರೂ ಕೇಳಿಬರುತ್ತಿದೆ. ಆದರೆ ಬಿಗ್ ಬಾಸ್ ತನ್ನ ಸ್ಪರ್ಧಿಗಳ ಗುಟ್ಟನ್ನು ಅಂತಿಮ ಕ್ಷಣದಲ್ಲೇ ಬಹಿರಂಗಗೊಳಿಸುತ್ತದೆ. ಅಲ್ಲಿಯವರೆಗೆ ಊಹೆ ಮಾಡುತ್ತಾ ಕೂರಬಹುದಷ್ಟೇ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments