Webdunia - Bharat's app for daily news and videos

Install App

15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ನಟ ಜಯಂ ರವಿ

Krishnaveni K
ಸೋಮವಾರ, 9 ಸೆಪ್ಟಂಬರ್ 2024 (14:30 IST)
Photo Credit: Facebook
ಚೆನ್ನೈ: ತಮಿಳಿನ ಖ್ಯಾತ ನಟ ಜಯಂ ರವಿ ತಮ್ಮ 15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಈ ವಿಚಾರವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಹಳ ಯೋಚನೆ ಮಾಡಿದ ನಂತರ ನಾನು ಮತ್ತು ಆರತಿ ನಮ್ಮ ವಿವಾಹ ಸಂಬಂಧಕ್ಕೆ ಡಿವೋರ್ಸ್ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಇದು ಅವಸರದಲ್ಲಿ ತೆಗೆದುಕೊಂಡ ನಿರ್ಧಾರವಲ್ಲ. ನಾವಿಬ್ಬರೂ ಹೊಂದಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದೆವು. ಆದರೆ ಇದು ಸಾಧ್ಯವಿಲ್ಲವೆನಿಸಿದಾಗ ಈ ಕಠಿಣ ತೀರ್ಮಾನ ಮಾಡಿದ್ದೇನೆ. ನಿಮ್ಮೆಲ್ಲರ ಬೆಂಬಲ ನನ್ನ ಮೇಲಿರಲಿದೆ ಎಂದು ಅಂದುಕೊಳ್ಳುತ್ತೇನೆ ಎಂದು ಜಯಂ ರವಿ ಟ್ವೀಟ್ ಮಾಡಿದ್ದಾರೆ.

ಈ ಸಮಯದಲ್ಲಿ ನಮ್ಮ ಕುಟುಂಬದ ಗೌಪ್ಯತೆ ಕಾಪಾಡಿಕೊಳ್ಳಲು ನಿಮ್ಮೆಲ್ಲರ ಸಹಕಾರ ಬೇಕು. ಅನಗತ್ಯ ವದಂತಿಗಳು, ಆರೋಪಗಳನ್ನು ಮಾಡದಂತೆ ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಜಯಂ ರವಿ ಸಂದೇಶದಲ್ಲಿ ತಿಳಿಸಿದ್ದಾರೆ.

ಜಯಂ ರವಿ ಮತ್ತು ಆರತಿ 2009 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಇದೀಗ 15 ವರ್ಷಗಳ ಸಹಜೀವನದ ಬಳಿಕ ವಿಚ್ಛೇದನ ಪಡೆಯಲು ತೀರ್ಮಾನಿಸಿದ್ದಾರೆ. ಆದರೆ ಇದಕ್ಕೆ ಕಾರಣವೇನು ಎಂಬುದನ್ಉನ ೆಲ್ಲೂ ಸ್ಪಷ್ಟವಾಗಿ ಹೇಳಿಲ್ಲ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments