Publish Date: Mon, 26 Jul 2021 (10:06 IST)
Updated Date: Mon, 26 Jul 2021 (10:08 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ ನಿಧನಕ್ಕೆ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಖ್ಯಾತ ಕಲಾವಿದೆ, ಅಭಿನಯ ಶಾರದೆ ಜಯಂತಿ ನಿಧನದ ಸುದ್ದಿ ಅತೀವ ದುಃಖ ತಂದಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಸಿಎಂ ತಮ್ಮ ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.
ಇನ್ನು, ವಿಪಕ್ಷ ನಾಯಕ ಸಿದ್ದರಾಮಯ್ಯ, ನನ್ನ ಇಷ್ಟದ ನಟಿ ಜಯಂತಿ ನಿಧನದಿಂದ ಅತೀವ ದುಃಖವಾಗಿದೆ. ಅವರ ಚಿತ್ರಗಳ ಮೂಲಕ ನಮ್ಮ ಮನದಲ್ಲಿ ಎಂದಿಗೂ ಅಜರಾಮರಾಗಿರುತ್ತಾರೆ ಎಂದಿದ್ದಾರೆ.