Publish Date: Mon, 13 Jul 2020 (10:01 IST)
Updated Date: Mon, 13 Jul 2020 (10:02 IST)
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎನ್ನಲಾಗಿದೆ.
ನಾಲ್ಕು ದಿನಗಳ ಹಿಂದೆ ಜಯಂತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರಿಗೆ ಕೊರೋನಾ ಇಲ್ಲ ಎಂದು ದೃಢಪಟ್ಟಿತ್ತು. ಹಾಗಿದ್ದರೂ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ. ಜಯಂತಿಗೆ ಈ ಮೊದಲೂ ಒಮ್ಮೆ ಉಸಿರಾಟದ ಸಮಸ್ಯೆ ಕಂಡುಬಂದಿತ್ತು. ಇದೀಗ ಮತ್ತೆ ಅನಾರೋಗ್ಯಕ್ಕೀಡಾಗಿದ್ದಾರೆ. ಆದರೆ ಅವರ ಆರೋಗ್ಯದ ಬಗ್ಗೆ ಗಾಬರಿಯಾಗಬೇಕಾಗಿಲ್ಲ ಎಂದು ಪುತ್ರ ಕೃಷ್ಣ ಕುಮಾರ್ ತಿಳಿಸಿದ್ದಾರೆ.