ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ಕೋರ್ಟ್ ವಿಸ್ತರಣೆ ಮಾಡಿದೆ.
ಇಂದು ಹತ್ಯೆ ಪ್ರಕರಣದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.
ಪವಿತ್ರಾ ಗೌಡ, ದರ್ಶರ್ನ್ ಸೇರಿದಂತೆ ಎಲ್ಲ ಆರೋಪಿಗಳ ಹೆಸರನ್ನು ನ್ಯಾಯಾಧೀಶರು ಕರೆದಾಗ ಆರೋಪಿಗಳು ಎಸ್ ಸರ್ ಎಂದು ಹೇಳಿ ವಿಚಾರಣೆಗೆ ಹಾಜರಾಗಿರುವುದನ್ನು ದೃಢ ಪಡಿಸಿದರು.
ಈ ವೇಳೆ ನ್ಯಾಯಾಧೀಶರ ಬಳಿ ಸಂಪೂರ್ಣ ಚಾರ್ಜ್‌ಶೀಟ್ ನೀಡುವಂತೆ ಹಾಗೂ ಎಲೆಕ್ಟ್ರಾನಿಕ್ಸ್ ಸಾಕ್ಷ್ಯಗಳನ್ನು ಒಂದು ವಾರದಲ್ಲಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದರು. ಆದರೆ ಇನ್ನೂ ನೀಡಿಲ್ಲ ಎಂದು ಆರೋಪಿಗಳ ಪರ ವಕೀಲರು ಕೋರ್ಟ್ ಗಮನಕ್ಕೆ ತಂದರು.