ಚೆನ್ನೈ : ಇತ್ತೀಚೆಗೆ ತಂಜಾವೂರ್ ನ ಸರ್ಕಾರಿ ಆಸ್ಪತ್ರೆಯೊಂದರ ಬಗ್ಗೆ ಕೆಟ್ಟದಾಗಿ ಮಾತನಾಡಿದ ತಮಿಳಿನ ಖ್ಯಾತ ನಟಿ ಜ್ಯೋತಿಕಾ ಇದೀಗ ಅದೇ ಆಸ್ಪತ್ರೆಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದಾರೆ.
ಹೌದು. ನಟಿ ಜ್ಯೋತಿಕಾ ತಂಜಾವೂರ್ ನ ಸರ್ಕಾರಿ ಆಸ್ಪತ್ರೆಯನ್ನು ಆಧುನಿಕರಣಗೊಳಿಸಲು ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ದೇಣಿಗೆ ನೀಡಿದ್ದಾರೆ. ಪತಿ ಸೂರ್ಯ ಅವರ ಅಗರಂ ಫೌಂಡೇಶನ್ ನ ಮೂಲಕ ತಮಿಳುನಾಡಿನ ಆರೋಗ್ಯ ಸಚಿವರಿಗೆ ಚೆಕ್ ಹಸ್ತಾಂತರಿಸಿದ್ದಾರೆ. ಹಾಗೂ ಈ ಹಣವನ್ನು ಆಸ್ಪತ್ರೆಯ ಅಭಿವೃದ್ಧಿಗೆ ಮಾತ್ರವೇ ಉಪಯೋಗಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.