Webdunia - Bharat's app for daily news and videos

Install App

ಕರಾವಳಿಯವರೇ ಹೀಗೇ ಮಾಡಿದ್ರೆ ಹೇಗೆ, ಕಲ್ಜಿಗ ಸಿನಿಮಾಗೆ ದೈವಾರಾಧಕರ ಆಕ್ರೋಶ

Sampriya
ಶುಕ್ರವಾರ, 13 ಸೆಪ್ಟಂಬರ್ 2024 (17:25 IST)
Photo Courtesy X
ಮಂಗಳೂರು: ಕೋಸ್ಟಲ್‌ವುಡ್‌ ನ ಖ್ಯಾತ ನಟ ಅರ್ಜುನ್ ಕಾಪಿಕಾಡ್ ನಟಿಸಿರುವ 'ಕಲ್ಜಿಗ' ಕನ್ನಡ ಸಿನಿಮಾ ಇಂದು ಬಿಡುಗಡೆಯಾಗಿದ್ದು, ಸಿನಿಮಾದಲ್ಲಿ ನಟ ಕಾರಣಿಕದ ಕೊರಗಜ್ಜನ ದೈವದ ಅನುಕರಣ ಮಾಡಿದಕ್ಕೆ ದೈವಾರಾಧನೆ ಸಂರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

 ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ 'ಕಲ್ಜಿಗ' ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.

ಕಾಂತಾರ ಸಿನಿಮಾದ ಬಳಿಕ ಸಿನಿಮಾಗಳಲ್ಲಿ ದೈವದ ಕುರಿತಾದ ಪಾತ್ರಗಳನ್ನು ಮಾಡುವುದಕ್ಕೆ ದೈವಾರಾಧಕರು ವಿರೋಧವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಇದೀಗ ಇಂದು ಬಿಡುಗಡೆಗೊಂಡ ಕಲ್ಜಿಗ ಸಿನಿಮಾದಲ್ಲಿ ದೈವವನ್ನು ತೋರಿಸಿರುವುದಕ್ಕೆ  ಭಾರೀ ಆಕ್ರೋಶ ಹೊರಹಾಕುತ್ತಿದ್ದಾರೆ.  

ಕೊರಗಜ್ಜನ ವೇಷಭೂಷಣ ಧರಿಸಿದ ನಟನೋರ್ವ ಸಿನಿಮಾದ ಶೂಟಿಂಗ್‌ಗಾಗಿ ನರ್ತನ ಮಾಡಿದ್ದಾರೆ. ಹೀಗಾಗಿ ಸಿನಿಮಾ ತಂಡದ ವಿರುದ್ಧ ಮಂಗಳೂರಿನ ದೈವಾರಾಧನೆ ಸಂರಕ್ಷಣಾ ವೇದಿಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅದಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಬಾಯ್ಕಾಟ್ ಕಲ್ಜಿಗ ಅಭಿಯಾನ ಆರಂಭಗೊಂಡಿದೆ. ಇದೀಗ ಚಿತ್ರದ ವಿರುದ್ಧ ಕಾನೂನು ಹೋರಾಟ ನಡೆಸುವುದಕ್ಕೂ ನಿರ್ಧಾರ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments