Select Your Language

Notifications

webdunia
webdunia
webdunia
webdunia

ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ 'ಕಲ್ಕಿ 2898 AD' ಎರಡನೇ ದಿನದ ಕಲೆಕ್ಷನ್

Kalki 2898 AD box office collection

Sampriya

ನವದೆಹಲಿ , ಶನಿವಾರ, 29 ಜೂನ್ 2024 (17:58 IST)
Photo Courtesy X
ನವದೆಹಲಿ: ಕಲ್ಕಿ 2898ಎಡಿ ಸಿನಿಮಾ ಬಿಡುಗಡೆಯಾದ ಎರಡು ದಿನಕ್ಕೆ ಭರ್ಜರಿ ಕಲೆಕ್ಷನ್‌ನೊಂದಿಗೆ ಸಕ್ಸಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿದೆ. ಇನ್ನೂ ಬಿಡುಗಡೆಯಾದ ಎರಡನೇ ದಿನಕ್ಕೆ ಜಾಗತಿಕ ಬಾಕ್ಸ್‌ ಆಫೀಸ್‌ನಲ್ಲಿ ₹298.5 ಕೋಟಿ ಗಳಿಸಿದೆ ಎಂದು ಸಿನಿಮಾ ತಯಾರಕರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಸಿನಿಮಾ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್‌, 'ಚಿತ್ರ ತೆರೆಕಂಡ ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ₹191.5 ಕೋಟಿಯನ್ನು ಗಳಿಸಿದೆ. ಎರಡನೇ ದಿನವಾದ ಶುಕ್ರವಾರ ₹107 ಕೋಟಿಯನ್ನು ಸಂಗ್ರಹಿಸಿದೆ. ಇನ್ನೂ ಚಿತ್ರ ಬಿಡುಗಡೆಯಾಗಿ ಎರಡು ದಿನಗಳಲ್ಲಿ ಒಟ್ಟು ₹298.5 ಕೋಟಿ ಗಳಿಸಿದೆ ಎಂದು ತಿಳಿಸಿದರು.

ಜೂನ್ 7ರಂದು ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಷೀಷ್ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಈ ಸಿನಿಮಾವನ್ನು ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡಿದ್ದು, ಸಿನಿಮಾವನ್ನು 600 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ಇನ್ನೂ ಸಿನಿಮಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಇನ್ನೂ ಸಿನಿಮಾ ನೋಡಿದ ಮಂದಿ ಚಿತ್ರದ ಭಾಗ 2ಗೆ ಕಾದು ಕುಳಿತಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಖ್ಯಾತ ನಟ ನಾಗರ್ಜುನ 'ಕಲ್ಕಿ 2898ಎಡಿ' ನೋಡಿ ಮಾಡಿದ್ದೇನು ಗೊತ್ತಾ