ಚೆನ್ನೈ: ನಟ, ರಾಜಕಾರಣಿ ಕಮಲ್ ಹಾಸನ್ ಗೆ ಕೊರೋನಾ ದೃಢಪಟ್ಟಿದ್ದು, ಅನಾರೋಗ್ಯದಿಂದಾಗಿ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗೆ ಕಮಲ್ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಅಮೆರಿಕಾಗೆ ತೆರಳಿದ್ದರು. ಅಲ್ಲಿಂದ ಮರಳಿದ ಕೆಲವೇ ದಿನಗಳಲ್ಲಿ ಕೊರೋನಾ ಸೋಂಕು ತಗುಲಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಕಮಲ್, ವಿದೇಶದಿಂದ ಮರಳಿದ ಬಳಿಕ ಕೆಮ್ಮು ಕಂಡುಬಂದಿದೆ. ಇದೀಗ ಚೆನ್ನೈನ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.