Webdunia - Bharat's app for daily news and videos

Install App

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Sampriya
ಗುರುವಾರ, 29 ಮೇ 2025 (18:59 IST)
Photo Courtesy X
ಬೆಂಗಳೂರು: ಕನ್ನಡದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕಾಲಿವುಡ್‌ನ ಹಿರಿಯ ನಟ ಕಮಲ್‌ಹಾಸನ್‌ ವಿರುದ್ಧ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಅದರ ಬೆನ್ನಲ್ಲೆ ಅವರ ನಟನೆಯ ಬಹುನಿರೀಕ್ಷಿತ ಥಗ್‌ ಲೈಫ್‌ ಚಿತ್ರಕ್ಕೆ ರಾಜ್ಯದಲ್ಲಿ ಬ್ಯಾನ್‌ ಭೀತಿ ಎದುರಾಗಿದೆ. 

ಕಮಲ್‌ ಹಾಸನ್‌ ಅವರು ಸಮಾರಂಭವೊಂದರಲ್ಲಿ ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.  ಕಮಲ್ ಹಾಸನ್ ಮೇ 30 ರೊಳಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರ ಮುಂದಿನ ಥಗ್ ಲೈಫ್ ಚಿತ್ರ ರಿಲೀಸ್ ಗೆ ಅವಕಾಶ ನೀಡದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀರ್ಮಾನಿಸಿದೆ.

ಕರ್ನಾಟಕ ಸಿನಿಮಾ ವಿತರಕ ಕಮಲಾಕರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಫಿಲ್ಮ್‌ ಚೇಂಬರ್‌ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು, ಥಾಮಸ್ ಡಿಸೋಜಾ, ಪ್ರದರ್ಶಕ ವಲಯದ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿರ್ಮಾಪಕರು ಭಾಗಿಯಾಗಿದ್ದರು. ಸಭೆ ನಡೆಯುತ್ತಿದ್ದಾಗಲೇ ಕೆಲ ಕನ್ನಡಪರ ಹೋರಾಟಗಾರರು ಮುತ್ತಿಗೆಗೆ ಯತ್ನಿಸಿದ ಘಟನೆಯೂ ನಡೆಯಿತು.

ಸಭೆಯಲ್ಲಿ ಮಾತನಾಡಿದ ಫಿಲ್ಮ್‌ ಚೇಂಬರ್‌ ಅಧ್ಯಕ್ಷ ನರಸಿಂಹಲು, ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾ ಸಿನಿಮಾ ಬ್ಯಾನ್ ಮಾಡ್ಬೇಕು ಎಂದು ಹಲವು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಈ ವಿಚಾರದ ಬಗ್ಗೆ ಚರ್ಚಿಸಿದ್ದು, ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇವೆ. ಅವರು ಹೇಳಿರುವುದರಲ್ಲಿ ತಪ್ಪಿದ್ದು, ಕಮಲ್ ಹಾಸನ್ ರ ತಪ್ಪನ್ನ ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕಮಲ್ ಹಾಸನ್ ಬಗ್ಗೆ ನಮಗೆ ಯಾರಿಗೂ ಕನಿಕರ ಇಲ್ಲ. ಇವತ್ತು ಅಥವಾ ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಖಂಡಿಸುತ್ತೇವೆ. ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ದರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಮಾಡಿಕೊಡಲ್ಲ ಎಂದು ನಿರ್ಮಾಪಕ ಸಾರಾ ಗೋವಿಂದು ಎಚ್ಚರಿಕೆ ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments