Publish Date: Sun, 07 Nov 2021 (10:51 IST)
Updated Date: Sun, 07 Nov 2021 (10:53 IST)
ಚೆನ್ನೈ: ಬಹುಭಾಷಾ ನಟ ಕಮಲ್ ಹಾಸನ್ ಗೆ ಇಂದು ಜನ್ಮದಿನದ ಸಂಭ್ರಮ. ಕಮಲ್ ಹಾಸನ್ ಇಂದು 67 ನೇ ಜನ್ಮ ದಿನ ಆಚರಿಸಿಕೊಳ್ಳುತ್ತಿದ್ದಾರೆ.
ಅವರ ಹುಟ್ಟುಹಬ್ಬಕ್ಕೆ ಸೆಲೆಬ್ರಿಟಿಗಳು, ಸ್ನೇಹಿತರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರುತ್ತಿದ್ದಾರೆ.
ಕಮಲ್ ಬರ್ತ್ ಡೇ ನಿಮಿತ್ತ ಅವರ ವಿಕ್ರಮ್ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ. ಇದು ಕಮಲ್ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆಯಾಗಿದೆ.