Publish Date: Mon, 23 Aug 2021 (19:23 IST)
Updated Date: Mon, 23 Aug 2021 (19:26 IST)
ಕಾಂಚಾನ-3 ಚಿತ್ರದಲ್ಲಿ ನಟಿಸುವ ಮೂಲಕ ಗಮನ ಸೆಳೆದಿದ್ದ ರಷ್ಯಾ ಮೂಲದ ನಟಿ ಅಲೆಗ್ಸಾಂಡ್ರಾ ಜಾವು ಅವರ ಶವ ಗೋವಾದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉತ್ತರ ಗೋವಾದ ಪಟ್ಟಣವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಲೆಗ್ಸಾಂಡ್ರಾ
ಜಾವು ಶವಪತ್ತೆಯಾಗಿದ್ದು, ಆತ್ಮಹತ್ಯೆಯೋ ಕೊಲೆಯೋ ಎಂಬ ಶಂಕೆ ಮೂಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಬಾಯ್ ಫ್ರೆಂಡ್ ಜೊತೆ ಬ್ರೇಕಪ್ ಮಾಡಿಕೊಂಡಿದ್ದ ನಟಿ ಖಿನ್ನತೆಗೆ ಒಳಗಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ.