Webdunia - Bharat's app for daily news and videos

Install App

ಸಂಸದೆಯಾದ ಬಳಿಕ ಕಂಗನಾ ರನೌತ್ ಮೊದಲ ಸಿನಿಮಾದ ಬಗ್ಗೆ ಬಿಗ್‌ ಅಪ್ಡೇಟ್

Sampriya
ಸೋಮವಾರ, 12 ಆಗಸ್ಟ್ 2024 (18:56 IST)
Photo Courtesy X
ಮುಂಬೈ: ಸಂಸದೆಯಾಗಿ ಆಯ್ಕೆಯಾದ ನಂತರ ನಟಿ ಕಂಗನಾ ರನೌತ್ ಅವರು ಅಭಿನಯಿಸಿದ ಮೊದಲ ಬಾಲಿವುಡ್ ಸಿನಿಮಾ 'ಎಮರ್ಜೆನ್ಸಿ' ಕುರಿತು ಚಿತ್ರತಂಡ ಬಿಗ್ ಅಪ್‌ಡೇಟ್ ನೀಡಿದೆ.  ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡ 'ಎಮರ್ಜೆನ್ಸಿ' ಸಿನಿಮಾದ ಟ್ರೇಲರ್ ಅನ್ನು ಬಿಡುಗಡೆ ಮಾಡಲು ಮುಹೂರ್ತ ಫಿಕ್ಸ್ ಮಾಡಲಾಗಿದೆ. ಸದ್ಯ ರಾಜಕಾರಣದಲ್ಲಿ ಬ್ಯುಸಿಯಾಗಿರುವ ಕಂಗನಾ ರನೌತ್ ಅವರ ಎಮರ್ಜೆನ್ಸಿ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಹುಟ್ಟಿಸಿದ್ದು,  ಈ ಚಿತ್ರಕ್ಕಾಗಿ ಪ್ರೇಕ್ಷಕರು ಬಹಳ ದಿನಗಳಿಂದ ಕಾತುರದಿಂದ ಕಾಯುತ್ತಿದ್ದಾರೆ.

ಇದೀಗ ಸಿನಿಮಾ ತಂಡ  ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿ, ಪ್ರೇಕ್ಷಕರ ಉತ್ಸಾಹವನ್ನು ಹೆಚ್ಚಿಸಿದ್ದಾರೆ. ಚಿತ್ರದ ಹೊಸ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಟ್ರೇಲರ್‌ಗೆ ಸಂಬಂಧಿಸಿದ ಮಾಹಿತಿಯನ್ನು ಕಂಗನಾ ಹಂಚಿಕೊಂಡಿದ್ದಾರೆ.

ಕಂಗನಾ ರನೌತ್ ಅವರು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ

'ಎಮರ್ಜೆನ್ಸಿ' ಚಿತ್ರದ ಟ್ರೇಲರ್ ಆಗಸ್ಟ್ 14 ರಂದು ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ  ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರಕ್ಕೆ ಕಂಗನಾ ರನೌತ್ ಬಣ್ಣ ಹಚ್ಚಿದ್ದಾರೆ.

ಕಂಗನಾ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡು , ಪ್ರಜಾಸತ್ತಾತ್ಮಕ ಭಾರತೀಯ ಇತಿಹಾಸದಲ್ಲಿ ಅತ್ಯಂತ ಕರಾಳ ಸಮಯ ಮತ್ತು ಅಧಿಕಾರದ ಆಸೆ ಇಡೀ ದೇಶವನ್ನು ಸುಟ್ಟು ಹಾಕಲಾಯಿತು ಎಂದು ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್ ಅವರ ತುರ್ತು ಪರಿಸ್ಥಿತಿಯ ಟ್ರೇಲರ್ ಆಗಸ್ಟ್ 14 ರಂದು ಬರಲಿದೆ. ಭಾರತೀಯ ಪ್ರಜಾಪ್ರಭುತ್ವ ಮತ್ತು ತುರ್ತು ಪರಿಸ್ಥಿತಿಯ ಕರಾಳ ಅಧ್ಯಾಯದ ಸ್ಫೋಟಕ ಕಥೆ ಸೆಪ್ಟೆಂಬರ್ 6 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ದೇಶದಲ್ಲಿ ಹೇರಿದ್ದ ತುರ್ತುಪರಿಸ್ಥಿತಿಯನ್ನು ಆಧರಿಸಿದ ಸಿನಿಮಾ 'ಎಮರ್ಜೆನ್ಸಿ'. ಚಿತ್ರದಲ್ಲಿ ಕಂಗನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಸಹ ನಟಿಯೇ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಕಂಗನಾ ಜೊತೆಗೆ ಶ್ರೇಯಸ್ ತಲ್ಪಾಡೆ, ಅನುಪಮ್ ಖೇರ್ ಮತ್ತು ಮಿಲಿಂದ್ ಸೋಮನ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಕಂಗನಾ ಕೊನೆಯದಾಗಿ 'ತೇಜಸ್' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments