Publish Date: Thu, 09 May 2024 (10:10 IST)
Updated Date: Thu, 09 May 2024 (10:13 IST)
ಬೆಂಗಳೂರು: ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಆಗಿದ್ದ ಅಶ್ಲೀಲ ವಿಡಿಯೋ ಬಗ್ಗೆ ಕನ್ನಡ ನಟಿ ಜ್ಯೋತಿ ರೈ ಸ್ಪಷ್ಟನೆ ನೀಡಿದ್ದಾರೆ. ಇದು ನಕಲಿ ಎಂದಿರುವ ಜ್ಯೋತಿ ರೈ ದೂರು ನೀಡಿರುವುದಾಗಿ ತಿಳಿಸಿದ್ದಾರೆ.
ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಇತ್ತೀಚೆಗೆ ನಟಿ ಬೋಲ್ಡ್ ಫೋಟೋ ಶೂಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರಿಂದ ಈ ವಿಡಿಯೋ ಕೂಡಾ ಜ್ಯೋತಿ ರೈ ಅವರದ್ದೇ ಎಂದು ಎಲ್ಲರೂ ಅಂದುಕೊಂಡಿದ್ದರು.
ಆದರೆ ಈಗ ಜ್ಯೋತಿ ರೈ ಈ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕೆಲವು ವ್ಯಕ್ತಿಗಳು ನನ್ನ ನಕಲಿ ಫೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟು ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಜ್ಯೋತಿ ರೈ ಹೇಳಿದ್ದಾರೆ.
ಮಂಗಳೂರು ಮೂಲದ ನಟಿ ಜ್ಯೋತಿ ರೈ ಕೆಲವು ಕನ್ನಡ ಧಾರವಾಹಿಗಳು, ವೆಬ್ ಸೀರೀಸ್ ಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಎರಡನೇ ಮದುವೆ ಮಾಡಿಕೊಂಡಿರುವ ನಟಿ ಆಗಾಗ ಗ್ಲಾಮರಸ್ ಫೋಟೋಗಳ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಆದರೆ ಇದೀಗ ಅದನ್ನೇ ಯಾರೋ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ನಟಿ ಅಳಲು ತೋಡಿಕೊಂಡಿದ್ದಾರೆ.