Publish Date: Thu, 28 Mar 2024 (13:30 IST)
Updated Date: Thu, 28 Mar 2024 (13:32 IST)
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ ಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.
ಇಂದು ಉಸಿರಾಟದ ತೊಂದರೆ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಗೊಳಗಾಗಿದ್ದ ಭಾಮಾ ಹರೀಶ್ ರನ್ನು ಕುಟುಂಬಸ್ಥರು ತಕ್ಷಣವೇ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಕೆಲವೇ ತಿಂಗಳ ಹಿಂದಿನವರೆಗೂ ಅವರು ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದರು. ವಾಣಿಜ್ಯ ಮಂಡಳಿ ವತಿಯಿಂದ ಪುನೀತ್ ರಾಜ್ ಕುಮಾರ್ ಗೆ ನಮನ ಸೇರಿದಂತೆ ಅನೇಕ ಕಾರ್ಯಕ್ರಮಗಳ ಮೂಲಕ ಗಮನ ಸೆಳೆದಿದ್ದರು. ಇದೀಗ ಅವರಿಗೆ ಹೃದಯಾಘಾತವಾದ ಸುದ್ದಿ ಬಂದಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ಅಭಿನಯಿಸಿದ ಮೊದಲ ಸಿನಿಮಾ ಮೆಜೆಸ್ಟಿಕ್ ನಿರ್ಮಾಪಕರಾಗಿದ್ದರು. ಇದೀಗ ಅವರು ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದಾರೆ. ಸದ್ಯದಲ್ಲೇ ಅವರ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಲಿದ್ದಾರೆ.