Webdunia - Bharat's app for daily news and videos

Install App

ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ ಗೆ ಹೃದಯಾಘಾತ

Krishnaveni K
ಗುರುವಾರ, 28 ಮಾರ್ಚ್ 2024 (13:30 IST)
Photo Courtesy: Twitter
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ ಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.

ಇಂದು ಉಸಿರಾಟದ ತೊಂದರೆ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಗೊಳಗಾಗಿದ್ದ  ಭಾಮಾ ಹರೀಶ್ ರನ್ನು ಕುಟುಂಬಸ್ಥರು ತಕ್ಷಣವೇ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕೆಲವೇ ತಿಂಗಳ ಹಿಂದಿನವರೆಗೂ ಅವರು ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದರು. ವಾಣಿಜ್ಯ ಮಂಡಳಿ ವತಿಯಿಂದ ಪುನೀತ್ ರಾಜ್ ಕುಮಾರ್ ಗೆ ನಮನ ಸೇರಿದಂತೆ ಅನೇಕ ಕಾರ್ಯಕ್ರಮಗಳ ಮೂಲಕ ಗಮನ ಸೆಳೆದಿದ್ದರು. ಇದೀಗ ಅವರಿಗೆ ಹೃದಯಾಘಾತವಾದ ಸುದ್ದಿ ಬಂದಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ಅಭಿನಯಿಸಿದ ಮೊದಲ ಸಿನಿಮಾ ಮೆಜೆಸ್ಟಿಕ್ ನಿರ್ಮಾಪಕರಾಗಿದ್ದರು. ಇದೀಗ ಅವರು ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದಾರೆ. ಸದ್ಯದಲ್ಲೇ ಅವರ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments