ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

Sampriya
ಬುಧವಾರ, 3 ಡಿಸೆಂಬರ್ 2025 (15:04 IST)
Photo Credit X
ಬೆಂಗಳೂರು: ಐಎಂಡಿಬಿ ಬಿಡುಗಡೆ ಮಾಡಿದ 2025ರ ಭಾರತದ ಅತ್ಯಂತ ಜನಪ್ರಿಯ ತಾರೆಯರ  ಟಾಪ್‌ 10 ಪಟ್ಟಿಯಲ್ಲಿ ಕರ್ನಾಟಕದ ಮೂವರು ಸ್ಥಾನ ಪಡೆದಿದೆ. ವಿಶೇಷವೆಂದರೆ ಈ ಬಾರಿ ಬಾಲಿವುಡ್‌ ಸೂಪರ್‌ಸ್ಟಾರ್‌ಗಳಾದ ಶಾರುಖ್, ಸಲ್ಮಾನ್ ಸ್ಥಾನ ಪಡೆದಿಲ್ಲ. 

ಈ ಬಾರಿ ಟಾಪ್ 10ರಲ್ಲಿ ಬಹುತೇಕ ಹೊಸ ಮುಖಗಳಿವೆ. ಕರ್ನಾಟಕದ ರಶ್ಮಿಕಾ ಮಂದಣ್ಣ, ರುಕ್ಮಿಣಿ ವಸಂತ್, ರಿಷಬ್ ಶೆಟ್ಟಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ತೆಲುಗು ಹಾಗೂ ತಮಿಳಿನ ಯಾರೊಬ್ಬ ಕಲಾವಿದರೂ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ಐಎಂಡಿಬಿ ಪ್ರತಿ ವರ್ಷದ ಅಂತ್ಯದಲ್ಲಿ ಜನಪ್ರಿಯ ಸ್ಟಾರ್ಸ್​ ಪಟ್ಟಿ ಬಿಡುಗಡೆ ಮಾಡುತ್ತದೆ. ವರ್ಷ ಪೂರ್ತಿ ಹೆಚ್ಚು ಟ್ರೆಂಡ್ ಆದ ಸೆಲೆಬ್ರಿಟಿಗಳ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಕನ್ನಡದವರಾದ ರಶ್ಮಿಕಾ ಮಂದಣ್ಣ, ರಿಷಬ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಪಟ್ಟಿಯಲ್ಲಿ ಇದ್ದಾರೆ.

ಸಯ್ಯಾರ ಸಿನಿಮಾ ಮೂಲಕ ಹಿಟ್ ಆದ ಜೋಡಿ ಎಂದರೆ ಅದು ಅಹಾನ್ ಪಾಂಡೆ ಹಾಗೂ ಅನೀತ್ ಪಡ್ಡಾ. ಇವರಿಬ್ಬರು ಜನಪ್ರಿಯ ತಾರೆ ಪಟ್ಟಿಯಲ್ಲಿ ಮೊದಲ ಹಾಗೂ ಎರಡನೇ ಸ್ಥಾನದಲ್ಲಿ ಇದ್ದಾರೆ. ಮೂರನೇ ಸ್ಥಾನದಲ್ಲಿ ಆಮಿರ್ ಖಾನ್ ಇದ್ದಾರೆ. ಇಶಾನ್ ಖಟ್ಟರ್​ಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಬ್ಯಾಡ್ಸ್ ಆಫ್ ಬಾಲಿವುಡ್ ಮೂಲಕ ಮಿಂಚಿದ ಲಕ್ಷ್ಯ್​ಗೆ ಐದನೇ ಸ್ಥಾನ ಸಿಕ್ಕಿದೆ.

ಕನ್ನಡದ ನಟಿ ರಶ್ಮಿಕಾ ಮಂದಣ್ಣ ಸದ್ಯ ಪರಭಾಷೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಆರನೇ ಸ್ಥಾನ ಸಿಕ್ಕಿದೆ. ಲೋಕಃ ಸಿನಿಮಾ ಮೂಲಕ ಮತ್ತಷ್ಟು ಜನ ಮನ್ನಣೆ ಪಡೆದ ಕಲ್ಯಾಣಿ ಪ್ರಿಯದರ್ಶನ್​ 7ನೇ ಸ್ಥಾನದಲ್ಲಿ ಇದ್ದಾರೆ.

ಗ್ಲಾಮರ್ ಮೂಲಕ ಮಿಂಚೋ ತೃಪ್ತಿ ದಿಮ್ರಿಗೆ ಪಟ್ಟಿಯಲ್ಲಿ 8ನೇ ಸ್ಥಾನ. ಕಾಂತಾರ: ಚಾಪ್ಟರ್ 1  ಚಿತ್ರದ ನಟಿ ರುಕ್ಮಿಣಿ ವಸಂತ್ ಅವರು 9ನೇ ಸ್ಥಾನದಲ್ಲಿ ಇದ್ದಾರೆ. ಈ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ 10ನೇ ಸ್ಥಾನ ಸಿಕ್ಕಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments