Webdunia - Bharat's app for daily news and videos

Install App

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Krishnaveni K
ಗುರುವಾರ, 12 ಜೂನ್ 2025 (12:38 IST)
ಬೆಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಸಾವನ್ನಪ್ಪಿದ ವರದಿಯಾಗಿದ್ದು, ಚಿತ್ರತಂಡದಲ್ಲಿ ಒಂದು ರೀತಿಯ ಆತಂಕ ಮನೆ ಮಾಡಿದೆ. ಇದು ಯಾಕೆ ಹೀಗಾಗುತ್ತಿದೆ ಎಂಬ ಆತಂಕ ಶುರುವಾಗಿದೆ.

ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ಆರಂಭವಾದ ಬಳಿಕ ಒಂದೊಂದೇ ದುರ್ಘಟನೆ ನಡೆಯುತ್ತಲೇ ಇದೆ. ಶೂಟಿಂಗ್ ಗೆ ತೆರಳುತ್ತಿದ್ದ ಕಲಾವಿದರ ಬಸ್ ಅಪಘಾತದ ಬಳಿಕ ಇಬ್ಬರು ಕಲಾವಿದರು ಸಾವನ್ನಪ್ಪಿದ್ದರು. ಇದೀಗ ಮೂರನೆಯ ಕಲಾವಿದ ಸಾವನ್ನಪ್ಪಿದ ವರದಿಯಾಗಿದೆ.

ಇದೀಗ ಕೇರಳ ಮೂಲದ ಸಹ ಕಲಾವಿದ ವಿಜು ವಿಕೆ ಶೂಟಿಂಗ್ ಗೆಂದು ಬಂದಿದ್ದಾಗ ಹೋಟೆಲ್ ಕೊಠಡಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಇದರೊಂದಿಗೆ ಕೆಲವೇ ದಿನಗಳ ಅಂತರದಲ್ಲಿ ಕಾಂತಾರ ಸಿನಿಮಾದ ಮೂರನೇ ಕಲಾವಿದ ಸಾವನ್ನಪ್ಪಿದ್ದಂತಾಗಿದೆ.

ಇದಕ್ಕೆ ಮೊದಲು ಶೂಟಿಂಗ್ ಮುಗಿಸಿ ಸೌಪರ್ಣಿಕ ನದಿಯಲ್ಲಿ ಈಜಲು ಹೋಗಿದ್ದ ಜ್ಯೂನಿಯರ್ ಕಲಾವಿದ ಕಪಿಲ್ ಎಂಬಾತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಇದಾದ ಕೆಲವೇ ದಿನಕ್ಕೆ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ನಿಧನರಾಗಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ಮುಂದಿನ ಸುದ್ದಿ
Show comments