Select Your Language

Notifications

webdunia
webdunia
webdunia
webdunia

11 ದಿನಗಳಲ್ಲಿ ₹ 655 ಕೋಟಿ ಗಳಿಸಿದ ಕಾಂತಾರ ಚಾಪ್ಟರ್‌ 1: ಕರ್ನಾಟಕದಲ್ಲೇ ಬಾಚಿಕೊಂಡಿದ್ದೆಷ್ಟು ಗೊತ್ತಾ

Kantara chapter 1

Sampriya

ಬೆಂಗಳೂರು , ಸೋಮವಾರ, 13 ಅಕ್ಟೋಬರ್ 2025 (15:47 IST)
ಬೆಂಗಳೂರು: ಡಿವೈನ್ ಸ್ಟಾರ್‌ ರಿಷಭ್‌ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಾಪ್ಟರ್‌ 1 ಸಿನಿಮಾ ಥಿಯೇಟರ್‌ಗಳಲ್ಲಿ ಮೋಡಿ ಮಾಡಿದೆ. 11 ದಿನಗಳ ಗಳಿಕೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ.

ಸ್ಯಾಂಡಲ್‌ವುಡ್‌ನ ಹೆಮ್ಮೆಯ ಚಲನಚಿತ್ರ ಕಾಂತಾರ ಚಾಪ್ಟರ್ 1 ಸೂಪರ್‌ ಡೂಪರ್‌ ಹಿಟ್‌ ಆಗಿದೆ. ಈ ಸಿನಿಮಾ ವಿಶ್ವದಾದ್ಯಂತ ಅಪಾರ ಮೆಚ್ಚುಗೆಯನ್ನ ಪಡೆದುಕೊಳ್ಳುತ್ತಿದೆ. ಅಂದಹಾಗೆ ಕಾಂತಾರ ಚಾಪ್ಟರ್-1 ಬಿಡುಗಡೆಯಾದ ಕೇವಲ 11 ದಿನಗಳಲ್ಲಿ ಕರ್ನಾಟಕದಲ್ಲಿ 191 ಕೋಟಿಗೂ ಅಧಿಕ ಗಳಿಕೆ ಮಾಡುವ ಮೂಲಕ ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕಾಂತಾರ ಚಾಪ್ಟರ್-1 ಸಿನಿಮಾವನ್ನ ಈತನಕ ಒಂದು ಕೋಟಿಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಮುಂಬರುವ ಹಬ್ಬದ ವಾರದಲ್ಲಿ, ಚಿತ್ರಮಂದಿರಕ್ಕೆ ಬರುವ ಜನರ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ವಿಶ್ವದಾದ್ಯಂತ ಕಾಂತಾರ ಸಿನಿಮಾ 11 ದಿನಗಳಲ್ಲಿ 655 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಹುಬ್ಬೇರಿಸುವಂತೆ ಮಾಡಿದೆ. ಇನ್ನೇನು ದೀಪಾವಳಿ ಹಬ್ಬದ ರಜಾದಿನಗಳು ಬಂದರೆ ಕಾಂತಾರ ಸಿನಿಮಾ ಮತ್ತಷ್ಟು ಕಲೆಕ್ಷನ್ ಮಾಡಲಿದೆ. ಅಲ್ಲಿಗೆ 1,000 ಕೋಟಿ ಟಾರ್ಗೆಟ್ ಮುಟ್ಟುವ ನಿರೀಕ್ಷೆಗಳು ಸನಿಹದಲ್ಲಿವೆ. 

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಬೆಡ್ ಹತ್ತುವ ಮೊದಲು ಯೋಚನೆ ಮಾಡ್ಬೇಕಿತ್ತು: ಡಿ ಬಾಸ್ ಫ್ಯಾನ್ಸ್ ಕೆರಳಿಸಿ ಮಹಿಳೆಯ ವಿಡಿಯೋ