ನವಂಬರ್ 27 ಕ್ಕೆ ಕಾಂತಾರ 2 ಮುಹೂರ್ತ?

Webdunia
ಭಾನುವಾರ, 19 ನವೆಂಬರ್ 2023 (09:30 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಾಂತಾರ 2 ಯಾವಾಗ ಶುರು ಎಂಬುದಕ್ಕೆ ಉತ್ತರ ಸಿಕ್ಕಿದೆ.

ಕಾಂತಾರ 1 ಅನಿರೀಕ್ಷಿತವಾಗಿ ಭಾರೀ ಸಕ್ಸಸ್ ಆದ ಮೇಲೆ ರಿಷಬ್ ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ ಸಿಕ್ಕಿತು. ಹೀಗಾಗಿ ರಿಷಬ್ ಮತ್ತು ತಂಡ ಕಾಂತಾರ 2 ಗಾಗಿ ಸಾಕಷ್ಟು ತಯಾರಿ ನಡೆಸಿದೆ.

ಕಳೆದ ಒಂದು ವರ್ಷದಿಂದ ಹೊಂಬಾಳೆ ಫಿಲಂಸ್ ಮತ್ತು ರಿಷಬ್ ಶೆಟ್ಟಿ ಕಾಂತಾರ 2 ಚಿತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸಿದೆ. ಮೊದಲ ಭಾಗ ಕೇವಲ 18 ಕೋಟಿ ರೂ.ನಲ್ಲಿ ಚಿತ್ರೀಕರಣವಾಗಿತ್ತು. ಆದರೆ 600 ಕೋಟಿ ಸನಿಹ ಬಾಕ್ಸ್ ಆಫೀಸ್ ನಲ್ಲಿ ದುಡ್ಡು ಮಾಡಿತ್ತು.

ಇದೀಗ ಕಾಂತಾರ 2 ಸಿನಿಮಾವನ್ನು 100 ಕೋಟಿಗೂ ಅಧಿಕ ಬಜೆಟ್ ನಲ್ಲಿ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ. ಇದಕ್ಕಾಗಿ ರಿಷಬ್ ತಮ್ಮ ಲುಕ್ ನಿಂದ ಹಿಡಿದು ಸಾಕಷ್ಟು ತಯಾರಿ ಮಾಡಿದ್ದಾರೆ. ಹಳೆಯ ಕಾಲಘಟ್ಟಕ್ಕೆ ತಕ್ಕಂತೆ ಸೆಟ್ ನಿರ್ಮಾಣವಾಗಲಿದೆ.

ಈ ಸಿನಿಮಾದ ಮುಹೂರ್ತ ಇದೇ ತಿಂಗಳ ಕೊನೆಯಲ್ಲಿ ಅಂದರೆ ನವಂಬರ್ 27 ಕ್ಕೆ ನಡೆಯಲಿದೆ ಎಂಬ ಮಾತು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಶೂಟಿಂಗ್ ಕೂಡಾ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments