ಒಂದೇ ವಾರಕ್ಕೆ ₹ 510 ಕೋಟಿ ಚಾಚಿಕೊಂಡ ಕಾಂತಾರ ಪ್ರೀಕ್ವೆಲ್‌: ಹಲವು ದಾಖಲೆಗಳು ಉಡೀಸ್‌

Sampriya
ಶುಕ್ರವಾರ, 10 ಅಕ್ಟೋಬರ್ 2025 (14:03 IST)
ಬೆಂಗಳೂರು: ರಿಷಭ್‌ ಶೆಟ್ಟಿ ನಿರ್ದೇಶನ ಮತ್ತು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡ ಕಾಂತಾರ ಪ್ರಿಕ್ವೇಲ್‌ ಸಿನಿಮಾ ಚಿತ್ರಮಂದಿರದಲ್ಲಿ ಧೂಳೆಬ್ಬಿಸಿದೆ. ಒಂದೇ ವಾರದಲ್ಲಿ ₹500 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಮುನ್ನುಗ್ಗಯತ್ತಿದೆ. 

 ಅ.2 ರಂದು ಕಾಂತಾರ ಚಿತ್ರ ವಿಶ್ವದಾದ್ಯಂತ 7 ಭಾಷೆಗಳಲ್ಲಿ ತೆರೆಕಂಡಿತ್ತು. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಕಾಂತಾರಕ್ಕೆ ಅತ್ಯದ್ಭುತ ರೆಸ್ಪಾನ್ಸ್ ಸಿಗುತ್ತಿದ್ದು ವಿದೇಶದಲ್ಲೂ ಕಾಂತಾರ ಚಿತ್ರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಿಣಾಮ ಮೊದಲ ವಾರ ದಾಖಲೆಯ ಕಲೆಕ್ಷನ್ ಮಾಡಿದೆ.

ಕಾಂತಾರ ಅಧ್ಯಾಯ 1 ಸಿನಿಮಾ ಸೂಪರ್‌ ಡೂಪರ್‌ ಹಿಟ್‌ ಆಗಿದೆ. ಗಳಿಕೆ ವಿಚಾರದಲ್ಲಿ ಈತನಕ ಮೌನವಾಗಿದ್ದ ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್  ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಸಿನಿಮಾ ವಿಶ್ವದಾದ್ಯಂತ ₹ 509.25 ಕೋಟಿ ಕಲೆಕ್ಷನ್ ಮಾಡಿದೆ.

ಸಿನಿಮಾ ಬಿಡುಗಡೆಯಾದ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು ₹ 510 ಕೋಟಿ ಬಾಕ್ಸಾಫೀಸ್ ಕಲೆಕ್ಷನ್ ಮಾಡಿದೆ.

ಕನ್ನಡದಲ್ಲಿ ಅತಿವೇಗದಲ್ಲಿ ಬಾಕ್ಸಾಫೀಸ್ ಕಲೆಕ್ಷನ್ ಮಾಡಿರುವ ಎರಡನೇ ಚಿತ್ರದ ಸ್ಥಾನದಲ್ಲಿದೆ ಕಾಂತಾರ. ಕೆಜಿಎಫ್ 2 ಚಿತ್ರ ಮೊದಲ ಸ್ಥಾನದಲ್ಲಿದೆ. ಕೆಜಿಎಫ್2 ಒಟ್ಟು 1,215 ಕಲೆಕ್ಷನ್ ಮಾಡಿತ್ತು. ಆ ದಾಖಲೆಯನ್ನು ಕಾಂತಾರ ಮುರಿಯಲಿದೆಯೇ ಕಾದು ನೋಡಬೇಕಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments